ಕೊನೆಗೂ ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ, ವಿ ಗೌತಮ್ ಕಣಕ್ಕೆ

ಕೊನೆಗೂ ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ, ವಿ ಗೌತಮ್ ಕಣಕ್ಕೆ

ಬೆಂಗಳೂರು: ಈ ಬಾರಿ ಲೋಕಸಭೆ ಚುಣಾವಣೆ ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ, ಏಕೆಂದರೆ ಬಿಜೆಪಿ-ಜೆಡಿಸ್‌ ಮೈತ್ರಿ ಮಾಡಿಕೊಂಡಿದ್ದಾರೆ. ಹಾಗೇ ಕಾಂಗ್ರೆಸ್‌ ಸರ್ಕಾರ ಹೊಸ ಅಭ್ಯರ್ಥಿಗಳಿಗೆ ಮಣೆಯಾಕುತ್ತಿದ್ದಾರೆ. ಆದರೆ ಕೋಲಾರ ಕ್ಷೇತ್ರದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ರಾಜ್ಯ ಸರ್ಕಾರಕ್ಕೆ ಹಾಗೂ ಹೈಕಮಾಂಡ್‌ಗೆ ತುಂಬಾ ಕಷ್ಟಕರವಾಗಿತ್ತು.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು, ಒಂದು ಕ್ಷೇತ್ರದ ಅಭ್ಯರ್ಥಿ ಕಗ್ಗಂಟಾಗಿ ಉಳಿದಿತ್ತು. ಕೊನೆಗೂ ಕೋಲಾರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್​​ ರಿವೀಲ್​ ಮಾಡಿದೆ.

ಕೋಲಾರದಿಂದ ಯಾರು ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಪ್ರಶ್ನೆಗೆ ಇಂದು ಕಾಂಗ್ರೆಸ್​​ ಉತ್ತರ ನೀಡಿದೆ. ಕೋಲಾರ ಕ್ಷೇತ್ರಕ್ಕೆ ಕೆ, ವಿ ಗೌತಮ್​​ ಅವರಿಗೆ ಕಾಂಗ್ರೆಸ್​​ ಟಿಕೆಟ್​ ನೀಡಿದೆ. ಕೋಲಾರ ಟಿಕೆಟ್ ಯಾರಿಗೆ ಎನ್ನುವುದು ತೀವ್ರ ಕುತೂಹಲ ಮೂಡಿಸಿತ್ತು. ಎಲ್ಲಾ ಗೊಂದಲಗಳ ನಡುವೆ ಕೋಲಾರ ಕ್ಷೇತ್ರಕ್ಕೆ ಕೆ, ವಿ ಗೌತಮ್​​ ಅವರಿಗೆ ಕಾಂಗ್ರೆಸ್​​ ಟಿಕೆಟ್​ ನೀಡಿದೆ. ಎರಡೂ ಬಳಗಳನ್ನು ಬಿಟ್ಟು ಕಾಂಗ್ರೆಸ್​​ ನಾಯಕರು ಕೆ, ವಿ ಗೌತಮ್ ಅವರನ್ನು ಕಾಂಗ್ರೆಸ್​​ ಚುನಾವಣಾ ಅಖಾಡಕ್ಕೆ ಇಳಿಸಿದೆ. ಮಾಜಿ ಕಾರ್ಪೋರೆಟರ್​ ವಿಜಯ್​ ಕುಮಾರ್​ ಪುತ್ರ ಕೆ, ವಿ ಗೌತಮ್ ಆಗಿದ್ದಾರೆ.

ಸಚಿವ ಕೆಎಚ್​ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ನಡುವೆ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆದಿತ್ತು. ಇದರ ಮಧ್ಯೆ ಮುನಿಯಪ್ಪನವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಕೋಲಾರ ಟಿಕೆಟ್​ ಅಂತಿಮವಾಗಿದೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆಯೇ ರಮೇಶ್ ಕುಮಾರ್ ಬಣದ ಶಾಸಕರು ರಾಜೀನಾಮೆಗೆ ಮುಂದಾಗಿದ್ದರು. ಇದು ರಾಜ್ಯ ರಾಜಕಾರನದಲ್ಲಿ ಬಾರೀ ಸಂಚಲನಕ್ಕೆ ಕಾರಣವಾಗಿತ್ತು.ಕೊನೆಗೆ ಸಿದ್ದರಾಂಯ್ಯ, ಡಿಕೆ ಶಿವಕುಮಾರ್ ಸೇರಿಕೊಂಡು ಕೋಲಾರ ಕಾಂಗ್ರೆಸ್ ಶಾಸಕ ಸಂಧಾನ ಸಭೆ ನಡೆಸಿದ್ದು, ರಾಜೀನಾಮೆಗೆ ಮುಂದಾದ ನಾಯಕರುಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದು, ಯಾರಿಗೆ ನೀಡಬೇಕು ಎನ್ನುವುದನ್ನು ಚಿಂತನೆ ನಡೆಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos