ಕಾಗೇರಿ ಸ್ಪೀಕರ್

ಕಾಗೇರಿ ಸ್ಪೀಕರ್

ಬೆಂಗಳೂರು, ಜು. 30: ನೂತನ ಸಭಾಧ್ಯಕ್ಷರಾಗಿ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆ.ಆರ್.ರಮೇಶ್‌ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಸಭಾಧ್ಯಕ್ಷ ಸ್ಥಾನ ತೆರವಾಗಿತ್ತು. ಇಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಸಭಾಧ್ಯಕ್ಷರ ಚುನಾವಣೆಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹಿಂದೆ ಸರಿದಿದ್ದರಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಬೆಳಗ್ಗಿನವರೆಗೂ ಸಭಾಧ್ಯಕ್ಷ ಸ್ಥಾನಕ್ಕೆ ಕೆ.ಜಿ.ಬೋಪಯ್ಯ, ಜಗದೀಶ್ ಶೆಟ್ಟರ್, ಎಸ್.ಸುರೇಶ್‌ಕುಮಾರ್ ಮತ್ತಿತರರ ಹೆಸರು ಕೇಳು ಬಂದಿತ್ತು. ಕೊನೆಯ ಕ್ಷಣದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೆಸರನ್ನು ಬಿಜೆಪಿ ಅಂತಿಮಗೊಳಿಸಿ, ಅವರಿಂದ ನಾಮಪತ್ರವನ್ನು ಸಲ್ಲಿಸಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೋವಿಂದ ಕಾರಜೋಳ, ಎಸ್.ಸುರೇಶ್‍ ಕುಮಾರ್, ಕೆ.ಎಸ್‍.ಈಶ್ವರಪ್ಪ ಮತ್ತಿತರರು ಉಪಸ್ಥಿತರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos