ಕಾಲಿಗೆ ಮೊಬೈಲ್’ಕಟ್ಟಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಬಂದ ಭೂಪ

ಕಾಲಿಗೆ ಮೊಬೈಲ್’ಕಟ್ಟಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಬಂದ ಭೂಪ

ಬೆಂಗಳೂರು, ಮೇ . 23, ನ್ಯೂಸ್ ಎಕ್ಸ್ ಪ್ರೆಸ್: ಇಂದು ಲೋಕಸಭಾ ಚುನಾವಣೆಯ ಫಲಿತಾಂಶದ್ದು,  ಎಲ್ಲಾ ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಹೌದು, ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಪತ್ರಗಳ ಎಣಿಕೆ ನಡೆಯುತ್ತಿದೆ. ಮತ ಎಣಿಕೆ ಸಂದರ್ಭದಲ್ಲಿ ಅಭ್ಯರ್ಥಿಗಳ ಪರ ಹಾಜರಿರುವ ಏಜೆಂಟರುಗಳಿಗೆ ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

ಆದರೂ ಕೂಡ ಕೆಲವು ಏಜೆಂಟರು ಮೊಬೈಲ್ ಅನ್ನು ತೆಗೆದುಕೊಂಡು ಹೋಗಿ ಫಜೀತಿ ಅನುಭವಿಸಿದ್ದಾರೆ. ಆದರೆ ಭದ್ರತಾ ಸಿಬ್ಬಂದಿ ಒಳಗೆ ಬಿಡಲಾಗುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ ವೇಳೆ ಅನಿವಾರ್ಯವಾಗಿ ಪರಿಚಿತರ ಬಳಿ ಮೊಬೈಲ್ ನೀಡಿ ಹೋಗಿದ್ದಾರೆ.

ಇದರ ಮಧ್ಯೆ ಬಿಜೆಪಿ ಅಭ್ಯರ್ಥಿ ಪರ ಮತ ಎಣಿಕೆ ಕೇಂದ್ರಕ್ಕೆ ತೆರಳುತ್ತಿದ್ದ ಏಜೆಂಟನೊಬ್ಬ ತನ್ನ ಕಾಲಿಗೆ ಮೊಬೈಲ್ ಕಟ್ಟಿಕೊಂಡು ಒಳಗೆ ತೆರಳಲು ಯತ್ನಿಸಿದ್ದು, ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಆತನನ್ನು ಹೊರಗೆ ಕಳುಹಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos