ʼಕಾಟೇರ’ ಸಿನಿಮಾದ ಸುದ್ದಿಗೋಷ್ಠಿ

ʼಕಾಟೇರ’ ಸಿನಿಮಾದ ಸುದ್ದಿಗೋಷ್ಠಿ

ಬೆಂಗಳೂರು: ನಮ್ಮ ಸ್ಯಾಂಡಲ್ ಚಿತ್ರರಂಗದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂದರೆ ಒಂದು ದೊಡ್ಡ ಮಟ್ಟದ ಕ್ರೇಜ್ ಸೃಷ್ಟಿಯಾಗುತ್ತದೆ. ಏಕೆಂದರೆ ಇವರು ಹೆಚ್ಚು ಅಭಿಮಾನಿ ಬಳಗ ಹೊಂದಿದ್ದಾರೆ. ಇವರ ಮುಂದಿನ ಸಿನಿಮಾದ ಕಾಟೇರ ಸಿನಿಮಾ ಮೇಲೆ ಅಭಿಮಾನಿಗಳು ಹೆಚ್ಚು ನಿರೀಕ್ಷೆಯನ್ನು ಹೊಂದಿದ್ದಾರೆ.
ನಟ ದರ್ಶನ್ ಅವರು ‘ಕಾಟೇರ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿದ್ದು, ಸಿನಿಮಾದಲ್ಲಿ ದರ್ಶನ್ಗೆ ಜೋಡಿಯಾಗಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್ ನಟಿಸುತ್ತಿದ್ದಾರೆ. ಇನ್ನುಳಿದ ಪಾತ್ರಗಳಲ್ಲಿ ಶ್ರುತಿ, ಕುಮಾರ್ ಗೋವಿಂದ್ ಮುಂತಾದವರು ಅಭಿನಯಿಸುತ್ತಿದ್ದಾರೆ. ‘ಕಾಟೇರ’ ಸಿನಿಮಾಗೆ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದು, ರಾಕ್ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅನೇಕ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos