ಕಾಫಿನಾಡಲ್ಲಿ ಖಾಕಿಗಳ ಸರ್ಪಗಾವಲು

ಕಾಫಿನಾಡಲ್ಲಿ ಖಾಕಿಗಳ ಸರ್ಪಗಾವಲು

ಚಿಕ್ಕಮಗಳೂರು, ಡಿ. 09 : ದತ್ತಜಯಂತಿ ಆಚರಣೆ ಹಿನ್ನೆಲೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾದ್ಯಂತ 35 ಚೆಕ್ ಪೋಸ್ಟ್, 48 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು, 800ಕ್ಕೂ ಅಧಿಕ ಕ್ಯಾಮೆರಾ ಹಾಗೂ 5 ಸಾವಿರಕ್ಕಿಂತಲೂ ಅಧಿಕ ಪೊಲೀಸರು ಕಾಫಿನಾಡಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ.
ವಿಶ್ವಹಿಂದೂ ಪರಿಷದ್ ಹಾಗೂ ಬಜರಂಗದಳ ನೇತೃತ್ವದಲ್ಲಿ ಡಿಸೆಂಬರ್ 10 ರಿಂದ 12ರವರೆಗೆ ಮೂರು ದಿನಗಳ ಕಾಲ ನಡೆಯುವ ದತ್ತಜಯಂತಿಗೆ ಜಿಲ್ಲಾಡಳಿತ ಜಿಲ್ಲಾದ್ಯಂತ ಸರ್ಪಗಾವಲನ್ನು ಹಾಕಿದೆ. ಡಿಸೆಂಬರ್ 10 ರಿಂದ 12ರವರೆಗೆ ಮೂರು ದಿನಗಳ ಕಾಲ ಜಿಲ್ಲಾದ್ಯಂತ ಮದ್ಯ ಮಾರಾಟವನ್ನ ನಿಷೇಧಿಸಿಸಲಾಗಿದೆ.
ನಿಷೇಧ: ಡಿ.12 ರಂದು ಚಿಕ್ಕಮಗಳೂರಿನ ಕೆ.ಎಂ.ರಸ್ತೆ, ಐ.ಜಿ. ರಸ್ತೆ, ಬಸವನಹಳ್ಳಿ ಮುಖ್ಯರಸ್ತೆ ಸೇರಿದಂತೆ ಆಲ್ದೂರು ಪಟ್ಟಣ, ಹಾಂದಿಯಿಂದ ವಸ್ತಾರೆವರೆಗೆ ಅಂಗಡಿ-ಮುಂಗಟ್ಟುಗಳನ್ನ ಮುಚ್ಚುವಂತೆ ಆದೇಶಿಸಲಾಗಿದೆ. ಡಿ. 10 ರಿಂದ 12ರವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಿಗಿರಿ, ದತ್ತಪೀಠ, ಗಾಳಿಕೆರೆ, ಮಾಣಿಕ್ಯಾಧಾರಕ್ಕೆ ಪ್ರವಾಸಿಗರನ್ನು ಸಂಪೂರ್ಣ ನಿಷೇಧಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos