ರಾಮನಗರ, ಮೇ. 16, ನ್ಯೂಸ್ ಎಕ್ಸ್ ಪ್ರೆಸ್: ರಾಮನಗರ ತಾಲ್ಲೂಕಿನ ಯರೆಹಳ್ಳಿ ಗ್ರಾಮದಲ್ಲಿ ಬೈಕ್ ನಲ್ಲಿ ಬರುವಾಗ ದಾಳಿ ಮಾಡಿದ ದುಷ್ಕರ್ಮಿಗಳು, ಕಣ್ಣಿಗೆ ಖಾರದ ಪುಡಿ ಎರಚಿ, ಕಲ್ಲು ಎತ್ತಿ ಹಾಕಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಪುಟ್ಟರಾಜು(45) ಹತ್ಯೆಯಾದವರೆಂದು ಹೇಳಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರಾಮನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.