ಕಮಲ ಪಾಳಯದಲ್ಲಿ ಪೈಟ್ ಶುರು

ಕಮಲ ಪಾಳಯದಲ್ಲಿ ಪೈಟ್ ಶುರು

ಬೆಂಗಳೂರು ,ಜು. 25 : ಮೈತ್ರಿ ಪತನ ವಾಗಿ ಇನ್ನೂ ಎರಡು ದಿನ ಕಳೆದಿಲ್ಲ. ಬಿಜೆಪಿ ಪಾಳಯದಲ್ಲಿ
ಈಗ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಮೊದಲೇ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಪೈಪೋಟಿ ಶುರು. ರಾಜ್ಯ ಸರ್ಕಾರದ ಗದ್ದುಗೆ ಹಿಡಿಯಲು ಶಾಸಕರು ನಾ ಮುಂದು ತಾ ಮುಂದು ಅಂತಿದ್ದಾರೆ. ಅದರಲ್ಲೂ ಸರ್ಕಾರ ಪತನಕ್ಕೆ ನಾಂದಿ ಹಾಡಿದ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಶಾಸಕರ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಈಗಾಗಲೇ ಗೋಕಾಕ್ನ ರಮೇಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಆಗುತ್ತಾರೆ ಅನ್ನೋ ಗಾಸಿಪ್ ಇದೆ. ಇವರ ಜೊತೆ ಮಹಿಳಾ ಕೋಟಾದಡಿ ಶಶಿಕಲಾ ಜೊಲ್ಲೆ, ಲಿಂಗಾಯತ ಕೋಟಾದಡಿ ಉಮೇಶ್ ಕತ್ತಿ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಯಾದವ ಸಮಾಜಕ್ಕೆ ಒಂದು ಸಚಿವ ಸ್ಥಾನ ಕೊಡಬೇಕು ಎಂದು ದಾವಣಗೆರೆಯಲ್ಲಿ ಜಿಲ್ಲಾ ಯಾದವ ಸಮಾಜದ ಮುಖಂಡ ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ. ಯಾದವ ಸಮುದಾಯದ ಪೂರ್ಣಿಮಾ ಶ್ರೀನಿವಾಸ್ ಚಿತ್ರದುರ್ಗದ ಹಿರಿಯೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಇವರಿಗೆ ಮಹಿಳಾ ಕೋಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos