ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿ, ನ. 13 : ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಧಾನ ಕ್ರೀಡಾಂಗಣದಲ್ಲಿ ಸಮ್ಮೇಳನ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ ಘೋಷಿಸಿದ್ದಾರೆ.

ಉಪಮುಖ್ಯಮಂತ್ರಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಚರ್ಚಿಸಿದಾಗ ವಿದ್ಯಾರ್ಥಿಗಳಿಗೆ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಹಾಗೂ ವಿಶ್ವವಿದ್ಯಾಲಯದ ಮಕ್ಕಳ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಪರಿಶೀಲಿಸಿ ಸ್ಥಳ ಹಾಗೂ ದಿನಾಂಕ ನಿಗದಿಪಡಿಸಲು ತಿಳಿಸಿದ್ದಾರೆ. 50-60 ಸಾವಿರ ಜನರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಡಾ. ಬಿ.ಆರ್. ಅಂಬೇಡ್ಕರ್ ಭವನ ಹಾಗೂ ಕಾರ್ಯಸೌಧದ ಮಹತ್ಮಾಗಾಂಧಿ ಸಭಾಂಗಣಗಳಲ್ಲಿ ಗೋಷ್ಠಿಗಳನ್ನು ಏರ್ಪಡಿಸಲಾಗುವುದು. ಜನಸಾಮಾನ್ಯರು ಹಾಗೂ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಮೂರು ದಿನಗಳ ಕಾಲ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

.

ಫ್ರೆಶ್ ನ್ಯೂಸ್

Latest Posts

Featured Videos