ಬೆಂಗಳೂರು: ಮೊದಲು ನಮ್ಮ ಕರ್ನಾಟಕ ರಾಜ್ಯವನ್ನು ವಿವಿಧ ಪ್ರಾಂತ್ಯಗಳಿಂದ ವಿಂಗಡಿಸಲಾಗಿದ್ದು ಅದನ್ನು ಕರ್ನಾಟಕ ರಾಜ್ಯವೆಂದು ಮರುನಾಮಕರಣ ಮಾಡಿ ಇಂದಿಗೆ 69 ವರ್ಷ ಕಳೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಇಂದು ನವೆಂಬರ್ ಒಂದರಂದು ಬೆಂಗಳೂರಿನಲ್ಲಿರುವ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವರ್ಣರಂಜಿತ ಕಾರ್ಯಕ್ರಮದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದ್ವಜಾರೋಹಣ ನೆರವೇರಿಸಿದರು.
ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕನ್ನಡ ಭಾಷೆಯ ಮೇಲೆ ಇಂದಿಗೂ ಹಲವಾರು ಭಾಷೆಗಳ ಪ್ರಭಾವ ಬೀರುತ್ತಿದ್ದರೂ ಕೂಡ ಅದನ್ನೆಲ್ಲ ಹಿಂದಿಕ್ಕಿ ನಮ್ಮ ಕನ್ನಡ ಭಾಷೆ ಹಾಗೂ ನಮ್ಮ ಕನ್ನಡ ನಾಡು ಇದೀಗ ಎಲ್ಲೆಡೆ ಮುಂದುವರಿಯುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಾಲಾ ಮತ್ತು ಪ್ರೌಡ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.