ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ತುಮಕೂರು: ಕೊರೋನಾ ಹಾಗೂ ಜಿಲ್ಲೆಯಲ್ಲಿ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಆಗಸ್ಟ್ ೧೫ರಂದು ನಡೆದ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಿದ ಮಾದರಿಯಲ್ಲಿಯೇ ಸಾಮಾಜಿಕ ಅಂತರ ಹಾಗೂ ಕಡ್ಡಾಯ ಮಾಸ್ಕ್, ಜನಸಂದಣಿಯಿಲ್ಲದಂತೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ರಾಜ್ಯೋತ್ಸವ ಸಮಾರಂಭವು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ ೮ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಿಂದ ತಾಯಿ ಭುವನೇಶ್ವರಿಯ ಮೆರವಣಿಗೆ ಆರಂಭವಾಗಿ ಜೂನಿಯರ್ ಕಾಲೇಜು ಮೈದಾನದವರೆಗೆ ನಡೆಯಲಿದೆ. ಇದರೊಂದಿಗೆ ಒಂದು ಕಲಾತಂಡ ಹಾಗೂ ಕೊರೋನಾ ಕುರಿತು ಅರಿವು ಮೂಡಿಸುವ ಒಂದು ಸ್ಥಬ್ಧಚಿತ್ರಕ್ಕೆ ಅವಕಾಶ ನೀಡಲಾಗುವುದು ಎಂದರು.
ಕೊರೋನಾ ಹಾಗೂ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನವಿರುವುದಿಲ್ಲ. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವಿರುವುದಿಲ್ಲ ಹಾಗೂ ವಿವಿಧ ಇಲಾಖೆಗಳ ಸ್ಥಬ್ಧಚಿತ್ರಗಳೂ ಇರುವುದಿಲ್ಲ ಎಂದ ಅವರು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕನ್ನಡ ರಾಜ್ಯೋತ್ಸವವನ್ನು ಅರ್ಧಪೂರ್ಣವಾಗಿ ಆಚರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos