ಕನ್ನಡಿಗರಿಗೆ ಸಿಹಿ ಸುದ್ದಿ: ಖಾಸಗಿ ವಲಯದಲ್ಲಿ ಮೀಸಲಾತಿ!

ಕನ್ನಡಿಗರಿಗೆ ಸಿಹಿ ಸುದ್ದಿ: ಖಾಸಗಿ ವಲಯದಲ್ಲಿ ಮೀಸಲಾತಿ!

ಬೆಂಗಳೂರು, ಮೇ.28, ನ್ಯೂಸ್ ಎಕ್ಸ್ ಪ್ರೆಸ್: ಖಾಸಗಿ ಕ್ಷೇತ್ರದಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವಂತೆ ಬಹುದಿನಗಳ ಕೂಗಿಗೆ ಕೊನೆಗೂ ಸರ್ಕಾರ ಓಗೊಟ್ಟಿದೆ. ಅಧಿಸೂಚನೆ ಹೊರಬಿದ್ದಿದೆ,ಸರೋಜಿನಿ ಮಹಿಷಿ ವರದಿ ಆಧಾರದ ಮೇಲೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆಯೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವರದಿಯನ್ನು ಪರಿಷ್ಕರಿಸಿ ಸರ್ಕಾರಕ್ಕೆ ಸಲ್ಲಿಸಿತ್ತು. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮುಂಬರುವ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.ಸರ್ಕಾರದಿಂದ ಯಾವುದೇ ಸೌಲಭ್ಯ ಪಡೆಯದಿರುವ ಉದ್ದಿಮೆಗಳು 10 ವರ್ಷದಿಂದ ಕರ್ನಾಟಕದಲ್ಲಿ ವಾಸವಾಗಿರುವ ಕನ್ನಡವನ್ನು ಓದಲು ಮತ್ತು ಬರೆಯಲು ಬರುವ ಕನ್ನಡಿಗರನ್ನು ಮಾತ್ರವೇ ನೇಮಕ ಮಾಡಿಕೊಳ್ಳಬೇಕೆಂದು ಹೇಳಿದೆ. ಕೈಗಾರಿಕಾ ಸಂಸ್ಥೆಗಳಲ್ಲಿ ಅಂಗವಿಕಲರಿಗೆ ಹುದ್ದೆಗಳಲ್ಲಿ ಶೇ. 5 ಮೀಸಲಾತಿ ನೀಡುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ಸರ್ಕಾರ ಕರ್ನಾಟಕ ಕೈಗಾರಿಕಾ ಉದ್ಯೋಗ ನಿಯಮ 1961ಕ್ಕೆ ತಿದ್ದುಪಡಿ ತರುತ್ತಿದೆ. ಈಗಾಗಲೇ ಸರ್ಕಾರ ಅನೇಕ ಕೈಗಾರಿಕೋದ್ಯಮಿಗಳ ಜತೆ ಚರ್ಚೆ ನಡೆಸಿದೆ ಶೀಘ್ರವೇ ಕನ್ನಡಿಗರಿಗೆ ಸಿಹಿಸುದ್ದಿ ದೊರೆಯಲಿದೆ.

ಫ್ರೆಶ್ ನ್ಯೂಸ್

Latest Posts

Featured Videos