ಕನ್ನಡ ರಾಜ್ಯೋತ್ಸವ ಆಚರಿಸಲು ಜಿಲ್ಲಾಡಳಿತ ಸಿದ್ಧತೆ

ಕನ್ನಡ ರಾಜ್ಯೋತ್ಸವ ಆಚರಿಸಲು ಜಿಲ್ಲಾಡಳಿತ ಸಿದ್ಧತೆ

ದೇವನಹಳ್ಳಿ ,ಅ. 24 : ಕನ್ನಡ ರಾಜ್ಯೋತ್ಸವಕ್ಕೆ ಇನ್ನೂ ಒಂದು ವಾರ ಬಾಕಿ ಇದೆ. ನ.1ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ವವ ಆಚರಿಸಲು ತಾಲೂಕಿನ ಚಪ್ಪರಕಲ್ಲು ಸರ್ಕಲ್ ಬಳಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಕೀರ್ಣದ ಜಿಲ್ಲಾಧಿಕಾರಿಗಳ ಸಭಾಂಗಣದಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ನಾಯಕ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಯಕ್ರಮದಲ್ಲಿ ಯಾವುದೇ ಲೋಪ ದೋಷ, ಗೊಂದಲಗಳಿಗೆ ಅವಕಾಶ ನೀಡದೆ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ತಾಲೂಕಿನ ಚಪ್ಪರಕಲ್ಲು ಸರ್ಕಲ್ ಬಳಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಕೀರ್ಣದ ಆವರಣದಲ್ಲಿ ಆಚರಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಕಲಾತಂಡಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರು.
ಜಿಲ್ಲಾಡಳಿತ ಭವನದ ಆವರಣದ ಸ್ವಚ್ಛತೆ, ಧ್ವನಿವರ್ಧಕ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಕ್ತ ಕ್ರಮಕೈಗೊಳ್ಳವಂತೆ ಸೂಚಿಸಿದ ಅಪರ ಜಿಲ್ಲಾಧಿಕಾರಿಗಳು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬೇಕಾಗುವ ಪೂರ್ವಭಾವಿ ತರಬೇತಿಯನ್ನು ನೀಡಬೇಕು. ಶಿಷ್ಟಾಚಾರದಂತೆ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಮ್ಮ, ಉಪ ಕಾರ್ಯದರ್ಶಿ ಕರಿಯಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕೃಷ್ಣಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos