ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್!

ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್!

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ  ಡೇಟ್‌ ಫಿಕ್ಸ್‌ ಆಗಿದೆ. ಏಪ್ರಿಲ್ 15ರಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಆರಂಭವಾಗಲಿದ್ದು ಏಪ್ರಿಲ್ 23ರ ವರೆಗೆ ನಡೆಯಲಿದೆ ಈ ಬಾರಿಯೂ ಕರಗವನ್ನು ತಿಗಳ ಸಮುದಾಯ ಅರ್ಚಕ ವಿಜ್ಞಾನದ ಅವರು ಹೊರರಿದ್ದಾರೆ ಲಕ್ಷಾಂತರ ಮಂದಿ ಭಕ್ತರು ಕರಗವನ್ನು ಕನ್ತುಂಬಿಕೊಳ್ಳಲಿದ್ದಾರೆ

ನಿನ್ನೆ ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ರು, ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.

ಹೂವಿನ ದಿಂಡು ಮತ್ತು ದೇವಿಯ ವಿಗ್ರಹವನ್ನು ಹೊಂದಿರುವ ಕಲಶದ ಅನುರೂಪ. ಕರಗವನ್ನು ಮುಟ್ಟದೆ ಅಂದರೆ ಹೂವಿನ ದಿಂಡಿನಿಂದ ಅಲಂಕೃತಗೊಂಡ ಮಣ್ಣಿನ ಮಡಿಕೆ ಅದರಲ್ಲಿರುವ ಕಲಶವನ್ನು ಕೈಯಲ್ಲಿ ಮುಟ್ಟದೆ ಆ ಕಲಶವನ್ನು ಹೊರುವ ವ್ಯಕ್ತಿಯ ತಲೆ ಮೇಲೆ ಇಡಲಾಗುತ್ತದೆ. ಕರಗವನ್ನು ಹೊರುವವರು ಮಹಿಳೆಯಂತೆ ಅಲಂಕಾರ ಮಾಡಿಕೊಳ್ಳಬೇಕು. ಕಂಕಣ, ಮಂಗಳ-ಸೂತ್ರ, ಹಣೆಯ ಮೇಲೆ ಸಿಂಧೂರ ಇಟ್ಟುಕೊಂಡು ಮುತೈದೆಯಂತೆ ಕಾಣಬೇಕು. ಈ ರೀತಿ ಅಲಂಕಾರ ಮಾಡಿಕೊಂಡೇ ಕರಗವನ್ನು ಹೊರಬೇಕು. ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲೂ ಕರಗ ಉತ್ಸವದ ಉಲ್ಲೇಖವನ್ನು ಗಮನಿಸಬಹುದು. ಕರಗವು ದ್ರೌಪದಿಯನ್ನು ಸರ್ವೋತ್ಕೃಷ್ಟ ಮಹಿಳೆ ಎಂದು ಚಿತ್ರಿಸುತ್ತದೆ ಮತ್ತು ಅವಳನ್ನು ಶಕ್ತಿ ದೇವತೆ ಎಂದು ಗೌರವಿಸುತ್ತದೆ.

 

 

 

ಫ್ರೆಶ್ ನ್ಯೂಸ್

Latest Posts

Featured Videos