ಖರೀದಿಸಲು ನಾವು ಪ್ರಾಣಿಗಳಲ್ಲ : ಬಿಸಿ ಪಾಟೀಲ್

ಖರೀದಿಸಲು ನಾವು ಪ್ರಾಣಿಗಳಲ್ಲ : ಬಿಸಿ ಪಾಟೀಲ್

ಮೈಸೂರು, ಅ.21 : ದನ, ಕುರಿ ಮಾರಾಟದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಿಪುಣ. ಅವರಿಗಿಂತ ಚೆನ್ನಾಗಿ ಬಲ್ಲವರು ಯಾರೂ ಇಲ್ಲ ಎಂದು ಹೇಳುವ ಮೂಲಕ ಹಿರೇಕೆರೂರು ಅನರ್ಹ ಶಾಸಕ ಬಿ.ಸಿ.ಪಾಟೀಲ್, ಶಾಸಕರನ್ನು ದನ, ಕುರಿ, ಕೋಳಿಗಳಂತೆ ಬಿಜೆಪಿಯವರು ಖರೀದಿ ಮಾಡಿದ್ದಾರೆ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮನ್ನು ಖರೀದಿಸಲು ನಾವು ದನ, ಕುರಿ, ಕೋಳಿಗಳಲ್ಲ. ಸಿದ್ದರಾಮಯ್ಯ ಅವರ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್ ನಲ್ಲಿ ನಮ್ಮನ್ನು ಹೇಗೆ ನಡೆಸಿಕೊಂಡರು ಎನ್ನುವುದರ ಬಗ್ಗೆ ಮೊದಲು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಾಗಿದ್ದರೆ 14 ಮಂದಿ ಪಕ್ಷದಿಂದ ಹೊರಬರುವ ಸಂದರ್ಭವೇ ಬರುತ್ತಿರಲಿಲ್ಲ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos