ಕರ್ನಾಟಕ ಉಚ್ಛ ನ್ಯಾಯಾಲಯ ನೇಮಕಾತಿ

ಕರ್ನಾಟಕ ಉಚ್ಛ ನ್ಯಾಯಾಲಯ ನೇಮಕಾತಿ

ಬೆಂಗಳೂರು, . 11, ನ್ಯೂಸ್ ಎಕ್ಸ್ ಪ್ರೆಸ್: ಕರ್ನಾಟಕ ಉಚ್ಛ ನ್ಯಾಯಾಲಯ ನೇಮಕಾತಿ 18 ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಆರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ಗೆ ಹೋಗಿ ಅರ್ಜಿಯನ್ನು ಮೇ 8.2019 ರ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ /ಕಲೆ / ವಾಣಿಜ್ಯ / ವ್ಯವಹಾರ ನಿರ್ವಹಣೆ / ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯಗಳ ಪದವಿಯಲ್ಲಿ, ಸಾಮಾನ್ಯ ವರ್ಗ ಮತ್ತು ಇರತೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಟ ಶೇಕಡ 55 ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಆಭ್ಯರ್ಥಿಗಳು ಕನಿಷ್ಟ ಶೇಕಡ 50 ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.

ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರೊಂದಿಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರುವುದು ಅತ್ಯಾವಶ್ಯಕವಾಗಿರುತ್ತದೆ.

ವಯೋಮಿತಿ: ಮೇ 8,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಪ್ರವರ್ಗ-1 ರ ಗರಿಷ್ಟ 40 ವರ್ಷ ವಯೋಮಿತಿಯ ಅಭ್ಯರ್ಥಿಗಳು ಮತ್ತು ಪ್ರವರ್ಗ-IIಎ/ II-ಬಿ / III-ಎ /III-ಬಿ /ಆರ್ಥಿಕವಾಗಿ ಹಿಂದುಳಿದ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/- ರಿಂದ 81,100/-ರೂ ವೇತನ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಬೆರಳಚ್ಚು ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಹುದ್ದೆಗೆ ಸಂಬಂಧಿಸಿದಂತೆ ನಿಗದಿ ಪಡಿಸಿದ ರೂ.250/-ಗಳ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-I ಕ್ಕೆ ಸೇರಿದ ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 100/-ರೂ ಗಳ ಅರ್ಜಿ ಶುಲ್ಕವನ್ನು ಆನ್ಲೈನ್ / ಚಲನ್ ನಮೂನೆ ಮೂಲಕ ಪಾವತಿ ಮಾಡತಕ್ಕದ್ದು.

ಆನ್ಲೈನ್ ಅಥವಾ ಚಲನ್ ಮೂಲಕ ಶುಲ್ಕವನ್ನು ಸಂದಾಯ ಮಾಡುವುದಕ್ಕಾಗಿ ಮೇ 13,2019 ಕೊನೆಯ ದಿನವಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿಯನ್ನು ವೆಬ್ಸೈಟ್ ಅನುಬಂಧವಿರುವ ಮಾಹಿತಿಗಳಿಗೆ ಅನುಸಾರವಾಗಿ ಇರತಕ್ಕದ್ದು. ಅಧಿಕೃತ ವೆಬ್ಸೈಟ್ನ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಆನ್ಲೈನ್ ಮೂಲಕವಲ್ಲದೆ ಇತರೆ ಯಾವುದೇ ವಿಧಾನದಲ್ಲಿ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

 

ಫ್ರೆಶ್ ನ್ಯೂಸ್

Latest Posts

Featured Videos