ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ

ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ

ಶ್ರೀನಗರ, ಅ. 5 : ಶ್ರೀನಗರದಿಂದ 55 ಕಿ.ಮೀ. ದೂರದಲ್ಲಿರುವ ಅನಂತ್ನಾಗ್ ಪಟ್ಟಣದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗಸ್ತಿನಲ್ಲಿದ್ದ ಭದ್ರತಾ ಸಿಬ್ಬಂದಿ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಮ್ಮು ಕಾಶ್ಮೀರದ ಅನಂತ್ನಾಗ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು 6 ಜನ ಗಂಭೀರ ಗಾಯಗೊಂಡಿದ್ದಾರೆ.
ಗಸ್ತಿನಲ್ಲಿದ್ದ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ಆದರೆ ಗುರಿ ತಪ್ಪಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. ದಾಳಿಯಲ್ಲಿ 12 ವರ್ಷದ ಬಾಲಕ ಸೇರಿದಂತೆ 6 ಜನ ಗಾಯಗೊಂಡಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.

ಫ್ರೆಶ್ ನ್ಯೂಸ್

Latest Posts

Featured Videos