ಕಟ್ಟಡ ಕುಸಿದು ಕಾರ್ಮಿಕ ಸಾವು

ಕಟ್ಟಡ ಕುಸಿದು ಕಾರ್ಮಿಕ ಸಾವು

ಬೆಂಗಳೂರು, ಜು. 10 : ನಗರದಲ್ಲಿ ನಿರ್ಮಾಣ ಹಂತದ ಎರಡು ಕಟ್ಟಡಗಳ ನೆಲಮಾಳಿಗೆ ಕುಸಿದು ಭಾರೀ ಅನಾಹುತ ಸಂಭವಿಸಿದೆ. ಪುಲಕೇಶಿನಗರ ಸಮೀಪದ ಕೂಕ್ಟೌನ್ನಲ್ಲಿ ಮಧ್ಯರಾತ್ರಿ 2.15ಕ್ಕೆ ಅನಾಹುತ ಸಂಭವಿಸಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. 4 ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಸಿಲುಕಿದ್ದ ಏಳು ಕಾರ್ಮಿಕರನ್ನ ರಕ್ಷಿಸಲಾಗಿದೆ. ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. 3 ಅಂತಸ್ಥಿನ ಕಟ್ಟಡದ ನೆಲಮಾಳಿಗೆಯಲ್ಲಿ ವಾಸವಿದ್ದ ಏಳು ಕಾರ್ಮಿಕರಿದ್ದ ಕುಟುಂಬ ಕಟ್ಟಡ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ. 3 ಅಂತಸ್ತಿನ ಕಟ್ಟಡ ಹಾಗೂ 4 ಅಂತಸ್ತಿನ ಕಟ್ಟಡದಲ್ಲಿ ಫರ್ನೀಚರ್ ಕೆಲಸ ನಡೆಯುತ್ತಿತ್ತು ಮೂಲ ತಿಳಿಸಿದೆ.
ಎನ್ಡಿಆರ್ಎಫ್ ಮತ್ತು 200ಕ್ಕೂ ಹೆಚ್ಚು ಅಗ್ನಿ ಶಾಮಕ ಸಿಬ್ಬಂದಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos