ಕಟ್ಟಡ ಕುಸಿದು 2 ಸಾವು

ಕಟ್ಟಡ ಕುಸಿದು 2 ಸಾವು

ಭಿವಾಂಡಿ, ಆ. 24 : ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಮಹಾರಾಷ್ಟ್ರದ ಭಿವಾಂಡಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತ ಪಟ್ಟಿರುವ ಘಟನೆ ನಡೆದಿದೆ. ನಾಲ್ವರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ಸ್ಥಳಕ್ಕೆ ದೌಡಾಯಿಸಿದ್ದು, ಎಂಟು ವರ್ಷಗಳ ಹಿಂದೆ ನಿರ್ಮಿಸಲಾದ ಕಟ್ಟಡದ ಕಾಂಕ್ರೀಟ್ ಅವಶೇಷಗಳ ಮಧ್ಯೆ ಸಿಲುಕಿರುವವರ ರಕ್ಷಣೆಗಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. 2ರಿಂದ 3 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕೆಲವರು ಅನುಮತಿ ಪಡೆಯದೆಯೇ ಕಟ್ಟಡದ ಒಳಗೆ ಪ್ರವೇಶಿಸಿದ್ದಾರೆ. 8 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಅಕ್ರಮ ಕಟ್ಟಡವಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಭಿವಾಂಡಿ ನಿಜಾಂಪುರ ಪುರಸಭೆಯ ಆಯುಕ್ತ ಅಶೋಕ್ ರಾಂಖಾಂಬ್ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos