ಕೆನಡಾದಲ್ಲೂ ‘ಕುರುಕ್ಷೇತ್ರ’ ಹವಾ !

ಬೆಂಗಳೂರು, ಆ. 12 : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ ಬಿಡುಗಡೆಗೊಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕೆನಡಾದಲ್ಲಿಯೂ ಕೂಡ ಹವಾಮಾಡಿದೆ. ಕೆನಡಾದಲ್ಲಿರುವ ಹಲವಾರು ಕನ್ನಡಿಗರು ಸಿನಿಮಾ ವೀಕ್ಷಿಸಿದ್ದಾರೆ. ದರ್ಶನ್ ಅಭಿನಯವನ್ನು ಮೆಚ್ಚಿಕೊಂಡಾಡಿದ್ದಾರೆ. ಐ ಲವ್ ಯೂ ಡಿ ಬಾಸ್ ಎಂದು ಕುಣಿದು ಕುಪ್ಪಳಿಸಿದ್ದಾರೆ. ವಿಡಿಯೋಗಳನ್ನು ಕೆನಡಾ ಕನ್ನಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಮುನಿರತ್ನ ನಿರ್ಮಾಣದ ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ನಿಖಿಲ್ ಕುಮಾರಸ್ವಾಮಿ, ಅರ್ಜುನ್ ಸರ್ಜಾ, ರವಿಚಂದ್ರನ್ ಹೀಗೆ ಬಹುತಾರಾಗಣವೇ ಇದೆ. ಆಗಸ್ಟ್ 9ರ ಶುಕ್ರವಾರದಂದು ಬೆಳಗ್ಗಿನ ಜಾವ 4.30ಕ್ಕೆ ಬೆಂಗಳೂರಿನ ಕೋರಮಂಗಲದ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆಗೊಂಡಿತು. ಅಂದು ವರಮಹಾಲಕ್ಷ್ಮಿ ಹಬ್ಬವಿದ್ದು, ಅದರ ಮಧ್ಯೆಯೂ ಅಭಿಮಾನಿಗಳು ಚಿತ್ರಮಂದಿರಕ್ಕೆ ಆಗಮಿಸಿ ಮಹಾಭಾರತದ ದೃಶ್ಯ ವೈಭವವನ್ನು ಕಣ್ತುಂಬಿಕೊಂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos