ಕೇರಳ, ಮಾ. 23, ನ್ಯೂಸ್ ಎಕ್ಸ್ ಪ್ರೆಸ್: ನಡೆಯಲಿರುವ ಲೋಕಸಭೆ ಚುನಾವಣೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೇರಳದಿಂದ ಸ್ಪರ್ಧೆ ಮಾಡುವ ಕುರಿತಂತೆ ಮುನ್ಸೂಚನೆ ದೊರೆತಿದೆ.
ರಾಹುಲ್ ಗಾಂಧಿ ಅವರನ್ನು ಕೇರಳದ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೋರಿದ್ದೇವೆ.
ವಯನಾಡು ಕ್ಷೇತ್ರವನ್ನು ಅವರಿಗೆ ಅಂಗೀಕಾರಕ್ಕಾಗಿ ನೀಡಲಾಗಿದೆ.
ಈ ಕೋರಿಕೆಯ ಸಂಬಂಧ ಅವರು ಬಹುತೇಕ ರಾಹುಲ್ ಗಾಂಧಿ ಅವರು ಇಂದು ತಮ್ಮ ಅಂತಿಮ ನಿರ್ಧಾರ ಪ್ರಕಟ ಮಾಡಲಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ, ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ತಿಳಿಸಿದ್ದಾರೆ.