ಕೆಜಿಎಫ್ ಚಾಪ್ಟರ್ ಡೇಟ್ ಅನೌನ್ಸ್

  • In Cinema
  • July 8, 2021
  • 126 Views
ಕೆಜಿಎಫ್ ಚಾಪ್ಟರ್ ಡೇಟ್ ಅನೌನ್ಸ್

ಬಹುಭಾಷಾ ಸಿನಿಮಾ ಕೆಜಿಎಫ್ ಚಾಪ್ಟರ್ 2 ಬಿಡುಗಡೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ಚಿತ್ರತಂಡ ಇದೀಗ ಸಿಹಿ ಸುದ್ದಿ ನೀಡಿದೆ.
ಈ ಕುರಿತು ನಿರ್ದೇಶಕ ಪ್ರಶಾಂತ್ ನೀಲ್ ಸೇರಿದಂತೆ ಇಡೀ ಚಿತ್ರತಂಡ ಟ್ವೀಟ್ ಮಾಡಿದ್ದು, ಶೀಘ್ರದಲ್ಲೆ ರಿಲೀಸ್ ಡೇಟ್ ಘೋಷಿಸುವುದಾಗಿ ತಿಳಿಸಿದೆ.
ಈ ಹಿಂದೆ ಚಿತ್ರತಂಡ ಘೋಷಿಸಿದಂತೆ ಜುಲೈನಲ್ಲಿ ಚಿತ್ರ ಪ್ರದರ್ಶನ ಕಾಣಲಿದೆ (ಜುಲೈ 21- 22) ಎಂದು ಹೇಳಲಾಗಿತ್ತು. ಆದರೆ, ಈಗ ಪ್ರಕಟಿಸಿರುವ ಪೋಸ್ಟರ್ ಚಿತ್ರದ ಮೇಲಿನ ನಿರೀಕ್ಷೆ ಹಾಗೂ ಕುತೂಹಲ ಹೆಚ್ಚಿಸಿದೆ. ಮುಂದಿನ ಪ್ರಕಟಣೆ ಯಾವಾಗ ಬರುತ್ತದೆ ಎಂದು ಕೆಜಿಎಫ್ ಚಿತ್ರಾಭಿಮಾನಿಗಳು ಹಾಗೂ ಯಶ್ ಅಭಿಮಾನಿಗಳು ಕಾಯುತ್ತಿದ್ದಾರೆ.ಚಿತ್ರದಲ್ಲಿ ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ಹಲವು ಪ್ರಮುಖ ನಟರು ಇದ್ದಾರೆ.
ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆಹೊಂಬಾಳೆ ಫಿಲ್ಮ್÷್ಸ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಚಿತ್ರ ನಿರ್ಮಿಸುತ್ತಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ.
ಈ ವರ್ಷ ತೆರೆ ಕಾಣಲಿರುವ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಕೆಜಿಎಫ್ ಚಾಪ್ಟರ್ 2 ಅಗ್ರ ಸ್ಥಾನದಲ್ಲಿದೆ. ಚಾಪ್ಟರ್ 1 ಕಣ್ತುಂಬಿಕೊAಡಿರುವ ರಾಕಿ ಭಾಯ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos