ತಮ್ಮ ಕುರ್ಚಿ ಉಳಿಯುವುದೇ ಗ್ಯಾರಂಟಿ ಇಲ್ಲ; ಬಿವೈವಿಗೆ ಖಂಡ್ರೆ ಟಕ್ಕರ್

ತಮ್ಮ ಕುರ್ಚಿ ಉಳಿಯುವುದೇ ಗ್ಯಾರಂಟಿ ಇಲ್ಲ; ಬಿವೈವಿಗೆ ಖಂಡ್ರೆ ಟಕ್ಕರ್

ಬೆಂಗಳೂರು: ಮುಡಾ ಹಗಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಿನದಿಂದ ದಿನಕ್ಕೆ ಸಂಕಷ್ಟ ಎದುರಾಗುತ್ತಿದ್ದು, ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಬಿರುಗಾಳಿ ಎಬ್ಬಿಸಿದೆ. ಇನ್ನು ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಇನ್ನು ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸನಿಹ ಬಂದಿದೆ ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಪ್ರತಿಕ್ರಿಯಿಸಿದ್ದು, ತಮ್ಮದೇ ಆದ ಪಕ್ಷದಲ್ಲಿ ತಮ್ಮ ಕುರ್ಚಿಯ ಬಗ್ಗೆ ಹಲವಾರು ಚರ್ಚೆಗಳು ನಡೆಯುತ್ತಿದ್ದರು ಕೂಡ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರ ಕುರ್ಚಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ. ವಿಜಯೇಂದ್ರ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಕೇಳೋ ನೈತಿಕತೆ ಇವರಿಗೆ ಇಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೇಳ್ತಿರೋ ವಿಜಯೇಂದ್ರ ರಾಜೀನಾಮೆ ಯಾವಾಗ ಅಂತ ವಿಜಯಪುರ ಭಾಗದವರು ಕೇಳ್ತಿದ್ದಾರೆ. ನಿಮ್ಮ ಕುರ್ಚಿ ಅಲುಗಾಡುತ್ತಿದೆ. ಹೀಗಿರುವಾಗ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ? ಎಂದು ಪ್ರಶ್ನಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos