ಅಮಿತ್ ಶಾ ಟೀಕಿಸಿದ ಖರ್ಗೆ!

ಅಮಿತ್ ಶಾ ಟೀಕಿಸಿದ ಖರ್ಗೆ!

ಬೆಂಗಳೂರು:  22 ವರ್ಷದ ನಂತರದಲ್ಲಿ ಲೋಕಸಭೆಯಲ್ಲಿ ಭದ್ರತಾ ಲೋಪ ಉಂಟಾಗಿತ್ತು. ವಿಧಾನಸಭೆಯಲ್ಲಿ ರಾಜ ನಾಯಕರು ಗಂಭೀರವಾದ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.  ಸಂಸತ್‌ನಲ್ಲಿ ಮತ್ತೊಮ್ಮೆ ಭದ್ರತಾ ವೈಫಲ್ಯ ಉಂಟಾಗಿತ್ತು. ಇಡೀ ಜಗತ್ತಿನ ಗಮನ ಸೆಳೆದಿರುವ ಸಂಸತ್ ಮೇಲಿನ ದಾಳಿ ಪ್ರಕರಣದ ಕುರಿತು ಇಂದಿಗೂ ಸದನದಲ್ಲಿ ಒಂದು ಹೇಳಿಕೆ ನೀಡಲಾಗದ ಅಮಿತ್ ಶಾ ಈ ದೇಶ ಕಂಡ ಅಸಮರ್ಥ ಗೃಹ ಸಚಿವ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಐಟಿ-ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಸಂಸತ್ ಮೇಲಿನ ದಾಳಿ ಯತ್ನ ಒಂದು ಗಂಭೀರ ವಿಷಯ ಎಂದು ವ್ಯಾಖ್ಯಾನಿಸಿದ್ದಾರೆ.

ಇಷ್ಟಾದರೂ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಈ ಕುರಿತು ಅಧಿಕೃತವಾದ ಹೇಳಿಕೆ ನೀಡಲು ಹಿಂದೇಟು ಹಾಕುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಸಂಸತ್ ಸದಸ್ಯರ ಅಮಾನತು ಕುರಿತಂತೆ ಪ್ರತಿಕ್ರಿಯಿಸಿದ ಅವರು, ದೇಶದ ಇತಿಹಾಸದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಎಂದೂ ಚುನಾಯಿತ ಸದಸ್ಯರ ಅಮಾನತು ಆಗಿರಲಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಗೃಹ ಸಚಿವರು ಪಾರ್ಲಿಮೆಂಟ್‍ನಲ್ಲಿ ಹೇಳಿಕೆ ನೀಡಬೇಕೆ ಹೊರತು, ಪ್ರತಿಪಕ್ಷಗಳ ಸದಸ್ಯರನ್ನು ಹೀಗೆ ಅಮಾನತುಗೊಳಿಸಲು ಮುಂದಾಗಬಾರದು. ಇದವರ ಅಸಮರ್ಥ ಕಾರ್ಯಶೈಲಿಯನ್ನು ಎತ್ತಿ ತೋರಿಸುತ್ತಿದೆ ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos