ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ್‌ ಖರ್ಗೆ

ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ್‌ ಖರ್ಗೆ

ಕಲಬುರಗಿ: ಲೋಕಸಭಾ ಚುನಾವಣೆಗೆ ಇನ್ನೊಂದು ದಿನ ಬಾಕಿ ಉಳಿದ್ದಿದು, ರಾಜ್ಯದೆಲ್ಲಡೆ ಅಭ್ಯರ್ಥಿಗಳ ಪರ ಕೇಂದ್ರ ಹಾಗೂ ರಾಜ್ಯ ನಾಯಕರು ಭರ್ಜರಿ ಪ್ರಚಾರ ಮಾಡಿದ್ದಾರೆ. ನಿನ್ನೆ ಕಲಬುರ್ಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರ ಪರ ಮಲ್ಲಿಕಾರ್ಜುನ್‌ ಖರ್ಗೆ ಮತಯಾಚನೆ ಮಾಡಿ ಈ ಸಂದರ್ಭದಲ್ಲಿ ಮಾತನಾಡಿದರು.

ನಾನು ರಾಜಕೀಯದಿಂದ ಎಂದಿಗೂ ನಿವೃತ್ತರಾಗುವುದಿಲ್ಲ, ನಾನು ಚುನಾವಣೆಗೆ ನಿಲ್ಲುತ್ತೇನೋ ಬಿಡುತ್ತೇನೋ ಆ ಮಾತು ಬೇರೆ. ಆದರೆ ತುಳಿತಕ್ಕೆ ಒಳಗಾದ ಸಮಾಜದ ಪರವಾದ ಹೋರಾಟ ಮಾಡಲು ನಾನು ರಾಜಕೀಯದಲ್ಲಿ ಇರುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಮಹತ್ವ ಹೇಳಿಕೆಯನ್ನ ನೀಡಿದ್ದಾರೆ.

ಆರ್ ಎಸ್ ಎಸ್ ಸಿದ್ದಾಂತಗಳನ್ನು ಸೋಲಿಸಲು ನಾನು ಹೋರಾಡುತ್ತಲೇ ಇರುತ್ತೇನೆ. ಕಳೆದ ಸಲದ ಸೋಲಿನ‌ ವಿಚಾರ ಬಿಡಿ. ನಾವು ಮಾಡಿದ ಕೆಲಸಕ್ಕೆ ನೀವು ಆಶೀರ್ವಾದ ಮಾಡಿ ರಾಧಾಕೃಷ್ಣ ಅವರಿಗೆ ಗೆಲ್ಲಿಸಬೇಕು. ನೀವು ಹಾಗೆ ಮಾಡದಿದ್ದರೆ ನಿಮ್ಮ ಹೃದಯದಲ್ಲಿ ನಾನು ಇಲ್ಲ ಎಂದು ತಿಳಿದುಕೊಳ್ಳುತ್ತೇನೆ ಎಂದು ಭಾವುಕರಾದರು.

ಫ್ರೆಶ್ ನ್ಯೂಸ್

Latest Posts

Featured Videos