ಕೆಡಿ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಿಚ್ಚ!?

 ಕೆಡಿ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಿಚ್ಚ!?

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗವು ಯಾವ ಚಿತ್ರರಂಗಕ್ಕೂ ಕಡಿಮೆ ಇಲ್ಲ ಎಂಬಂತೆ ಅದ್ಭುತವಾದ ಚಿತ್ರಗಳು ಮೂಡಿ ಬರುತ್ತಿದ್ದು, ಇದಕ್ಕೆ ಉದಾಹರಣೆ ಎಂಬಂತೆ ಕೆಜಿಫ್, ಕೆಜಿಫ್ 2 ಕಾಂತರಾ ಸಿನಿಮಾ ಹೀಗೆ ಹಲವಾರು ಸಿನಿಮಾಗಳು ಕನ್ನಡ ಚಿತ್ರರಂಗದಲ್ಲಿ ಬ್ಲಾಕ್ಬಸ್ಟರ್ ಆಗುತ್ತಿವೆ.

ಇನ್ನು ನಟ ಹಾಗೂ ನಿರ್ದೇಶಕ ಪ್ರೇಮ್ ಅವರು ನಿರ್ದೇಶಸುತ್ತಿರುವ ಫ್ಯಾನ್ ಇಂಡಿಯಾ ಕೆಡಿ ಸಿನಿಮಾ ಚಿತ್ರೀಕರಣ ಬರದಿಂದ ಸಾಗುತ್ತಿದ್ದು, ಈಗಾಗಲೇ ಈ ಚಿತ್ರದ ಟೀಸರ್ ಕೂಡ ರಿಲೀಸ್ ಆಗಿದ್ದು ಅಭಿಮಾನಿಗಳ ಮನೆಗೆದ್ದಿದೆ. ಅಲ್ಲದೆ ಈ ಈ ಚಿತ್ರದಲ್ಲಿ ಘಟಾನುಘಟಿ ನಾಯಕ, ನಾಯಕಿಯರು ನಟಿಸುತ್ತಿದ್ದು ಮತ್ತೆ ಇದೀಗ ಕೆಡಿ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಹೌದು, ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದ ಚಿತ್ರೀಕರಣ ಹೈದರಾಬಾದ್​​ನ ರಾಮೋಜಿ ಫಿಲಂ ಸಿಟಿ ಸ್ಟುಡಿಯೋನಲ್ಲಿ ನಡೆಯುತ್ತಿದೆ. ಸಿನಿಮಾ ಚಿತ್ರೀಕರಣಕ್ಕಾಗಿ ದೊಡ್ಡ ರೈಲಿನ ಸೆಟ್ ಹಾಕಿ ಆಕ್ಷನ್ ದೃಶ್ಯದ ಚಿತ್ರೀಕರಣವನ್ನು ಮಾಡಲಾಗುತ್ತಿದೆ. ಸಿನಿಮಾ ಸೆಟ್​​ಗೆ ಕಿಚ್ಚ ಸುದೀಪ್ ಭೇಟಿ ನೀಡಿದ್ದು, ಸಿನಿಮಾದ ಅತಿಥಿ ಪಾತ್ರದಲ್ಲಿ ಕಿಚ್ಚ ನಟಿಸಲಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಡಿಕೆಶಿ

ಸುದೀಪ್ ಅವರು ಈ ಹಿಂದೆ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಸಿನಿಮಾನಲ್ಲಿ ನಟಿಸಿದ್ದಾರೆ. ಆದರೆ ಆ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರನ್ನು ತಲುಪಿರಲಿಲ್ಲ. ಇದೀಗ ಹಲವು ಸ್ಟಾರ್ ನಟ-ನಟಿಯರನ್ನು ಗುಡ್ಡೆ ಹಾಕಿಕೊಂಡು ಪ್ರೇಮ್ ಅವರು ‘ಕೆಡಿ’ ಸಿನಿಮಾ ಮಾಡುತ್ತಿದ್ದು, ಧ್ರುವ ಸರ್ಜಾ ಪಾಲಿಗೆ ಇದು ಮಹತ್ವದ ಸಿನಿಮಾ ಆಗಿದೆ. ಧ್ರುವ ಸರ್ಜಾ, ಸುದೀಪ್ ಅವರ ಆಪ್ತ ನಟ ಆಗಿರುವ ಕಾರಣ, ಇದೀಗ ಸುದೀಪ್ ‘ಕೆಡಿ’ ಸಿನಿಮಾನಲ್ಲಿ ಮಹತ್ವದ ಅತಿಥಿ ಪಾತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೆ ಚಿತ್ರತಂಡದಿಂದ ಹೊರಬೀಳಬೇಕಿದೆ.

 

ಫ್ರೆಶ್ ನ್ಯೂಸ್

Latest Posts

Featured Videos