ಕಿಚ್ಚನ ಜೊತೆ ಬಾಲಿವುಡ್ ನಟ.!

ಕಿಚ್ಚನ ಜೊತೆ ಬಾಲಿವುಡ್ ನಟ.!

ಬೆಂಗಳೂರು, ಆ. 5: ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ-3’ ಸಿನಿಮಾಗೆ ಬಾಲಿವುಡ್ ನಟರೊಬ್ಬರು  ಎಂಟ್ರಿ ಕೊಡಲಿದ್ದಾರೆ. ಬಾಲಿವುಡ್ ನಟ ಅಫ್ತಾಬ್ ಶಿವದಾಸನಿ ಅವರು ಕಿಚ್ಚ ಸುದೀಪ್ ಜೊತೆ ಸ್ಕ್ರೀನ್ ಷೇರ್ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್ ಮತ್ತು ಅಫ್ತಾಬ್ ಶಿವದಾಸನಿ ಒಳ್ಳೆಯ ಸ್ನೇಹಿತರಾಗಿದ್ದಾರೆ. ಇದೇ ಮೊಟ್ಟ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸಲಿದ್ದಾರೆ. ಕೊಟಿಗೊಬ್ಬ ಸಿನಿಮಾ ಮಾಸ್ ಆ್ಯಂಡ್ ಥ್ರಿಲ್ಲರ್ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಫ್ತಾಬ್ ಶಿವದಾಸನಿ ತೆರೆ ಮೇಲೆ ಮಿಂಚಲಿದ್ದಾರೆ. “ಕೋಟಿಗೊಬ್ಬ-3′ ಚಿತ್ರದಲ್ಲಿ ನಾನು ಅಭಿನಯಿಸುತ್ತಿದ್ದೇನೆ. ಇದು ನನ್ನ ಮೊದಲ ಕನ್ನಡ ಸಿನಿಮಾವಾಗಿದೆ. ನಾನು ಮೊದಲ ಬಾರಿಗೆ ಸುದೀಪ್ ಜೊತೆ ನಟಿಸುವುದಕ್ಕೆ ತುಂಬಾ ಉತ್ಸುಕನಾಗಿದ್ದೇನೆ. ನಮ್ಮಿಬ್ಬರಿಗೆ ಸುಮಾರು 8 ವರ್ಷಗಳ ಹಿಂದೆ ಸೆಲೆಬ್ರೆಟಿ ಟಿ-20 ಕ್ರಿಕೆಟ್ ಮ್ಯಾಚಿನಲ್ಲಿ ಪರಿಚಯವಾಗಿತ್ತು. ಅಂದಿನಿಂದ ನಾವಿಬ್ರೂ ಸ್ನೇಹಿತರಾಗಿದ್ದೇವೆ. ಎಂದು ಅಫ್ತಾಬ್ ಶಿವದಾಸನಿ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos