ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ಗಳಿಂದ ಆಗುವ ಅನಾಹುತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ.
ಕೆ ಎಸ್ ಆರ್ ಟಿ ಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ. ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ನಾಗಸಂದ್ರ ನಿವಾಸಿ ರಾಜೇಂದ್ರ ಎಂಬುವವರು ಬಸ್ ಚಿಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ ನಿಯಂತ್ರಣ ತಪ್ಪಿ ಬಿದ್ದ ಬೈಕ್ ಸವಾರನ ಮೇಲೆ ಬಸ್ ಅರಿದಿದೆ.
ರಾಜೇಂದ್ರ 45 ವರ್ಷ ಎಂಬುವವರು ಸ್ಥಳದಲ್ಲಿ ಮತಪಟ್ಟಿದ್ದು ಸ್ಥಳಕ್ಕೆ ಪೋಲೀಸರು ಬಂದು ಪರಿಶೀಲನೆಯನ್ನು ನಡೆಸಿದ್ದಾರೆ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ವರ್ಷಕ್ಕೆ ಪಡೆದುಕೊಂಡು ಚಾಲಕನನ್ನು ವಿಚಾರಣೆ ನಡೆಸುತ್ತಿದ್ದಾರೆ.