ಪಾಕಿಸ್ತಾನ್ ವಿರುದ್ಧ ಕಿಂಗ್ ಕೊಹ್ಲಿಯ ಅಬ್ಬರ

ಪಾಕಿಸ್ತಾನ್ ವಿರುದ್ಧ ಕಿಂಗ್ ಕೊಹ್ಲಿಯ ಅಬ್ಬರ

ಬೆಂಗಳೂರು: ಪ್ರತಿಯೊಬ್ಬ ಕ್ರಿಕೆಟ್‌ ಅಭಿಮಾನಿಯೂ ಭಾರತ ಹಾಗೂ ಪಾಕಿಸ್ತಾನ ಪಂದ್ಯಕ್ಕೆ ಕಾಯುತ್ತಾನೆ. ಏಷ್ಯಾಕಪ್‌ ಟೂರ್ನಿ ಬದ್ಧವೈರಿಗಳ ನಡುವಿನ ಕಾದಾಟಕ್ಕೆ ವೇದಿಕೆಯಾಗುತ್ತಿದ್ದು, ಇಂದು ಬಹುನಿರೀಕ್ಷಿತ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಈ ಪಂದ್ಯ ತನ್ನದೇ ರೀತಿಯಲ್ಲಿ ವಿಶೇಷತೆ ಪಡೆದಿದ್ದೆ
ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇದರಲ್ಲಿ ವಿಶ್ವ ದಾಖಲೆಗಳು ಕೂಡ ಸೇರಿವೆ.
ಈ ಪಂದ್ಯದಲ್ಲಿ 94 ಎಸೆತಗಳನ್ನು ಎದುರಿಸಿದ ಕೊಹ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ ಅಜೇಯ 122 ರನ್ ಬಾರಿಸಿದರು. ಇದರೊಂದಿಗೆ ಹಲವು ದಾಖಲೆಗಳು ಕಿಂಗ್ ಕೊಹ್ಲಿಯ ಪಾಲಾಯಿತು. ಆ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ.
ಏಷ್ಯಾಕಪ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಇದೀಗ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಇದುವರೆಗೆ 4 ಸೆಂಚುರಿಗಳನ್ನು ಸಿಡಿಸಿದ್ದಾರೆ.
ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 13 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ವಿರಾಟ್ ಕೇವಲ 267 ಇನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಟಾಪ್-5 ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಸೇರ್ಪಡೆಯಾಗಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (18426 ರನ್) ಅಗ್ರಸ್ಥಾನದಲ್ಲಿದ್ದು, ಕಿಂಗ್ ಕೊಹ್ಲಿ (13024) 5ನೇ ಸ್ಥಾನ ಅಲಂಕರಿಸಿದ್ದಾರೆ.
ಸಚಿನ್ ತೆಂಡೂಲ್ಕರ್ (49 ಶತಕಗಳು) ಬಳಿಕ ಏಕದಿನ ಕ್ರಿಕೆಟ್ನಲ್ಲಿ 47 ಶತಕಗಳನ್ನು ಸಿಡಿಸಿದ ವಿಶ್ವದ ಎರಡನೇ ಬ್ಯಾಟರ್ ಎಂಬ ವಿಶ್ವ ದಾಖಲೆ ಕೂಡ ಕೊಹ್ಲಿ ಪಾಲಾಗಿದೆ.
ಏಕದಿನ ಕ್ರಿಕೆಟ್ನಲ್ಲಿ ವೇಗವಾಗಿ 8 ಸಾವಿರದಿಂದ 13 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಕೂಡ ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 77 ಶತಕಗಳನ್ನು ಬಾರಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ದಾಖಲೆ ಕೂಡ ಕಿಂಗ್ ಕೊಹ್ಲಿ ಪಾಲಾಗಿದೆ. ಈ ಪಟ್ಟಿಯಲ್ಲಿ ಒಟ್ಟು 100 ಸೆಂಚುರಿ ಸಿಡಿಸಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, ಈ ವಿಶ್ವ ದಾಖಲೆಯನ್ನು ಮುರಿಯಲು ಕಿಂಗ್ ಕೊಹ್ಲಿಗೆ ಇನ್ನೂ 24ಶತಕಗಳ ಅವಶ್ಯಕತೆಯಿದೆ.

ಫ್ರೆಶ್ ನ್ಯೂಸ್

Latest Posts

Featured Videos