ಆಟಕ್ಕೂ ಮುಂಚೆ ವಿಶೇಷ ದಾಖಲೆ ಬರೆದ ಕನ್ನಡಿಗ ಕೆಎಲ್ ರಾಹುಲ್

ಆಟಕ್ಕೂ ಮುಂಚೆ ವಿಶೇಷ ದಾಖಲೆ ಬರೆದ ಕನ್ನಡಿಗ ಕೆಎಲ್ ರಾಹುಲ್

ಬೆಂಗಳೂರು: ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬೆನ್ ಸ್ಟೋಕ್ಸ್​ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಫೀಲ್ಡಿಂಗ್​ಗಾಗಿ ಕಣಕ್ಕಿಳಿದಿರುವ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ವಿಶೇಷ ದಾಖಲೆ ಬರೆದಿದ್ದಾರೆ.

ಈ ಪಂದ್ಯದಲ್ಲಿ ಮೈದಾನಕ್ಕಿಳಿಯುತ್ತಿದ್ದಂತೆ ಭಾರತ ಪರ 50 ಟೆಸ್ಟ್ ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ಕೆಎಲ್ ರಾಹುಲ್ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 37ನೇ ಆಟಗಾರ ಎನಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ ಇದುವರೆಗೆ 84 ಟೆಸ್ಟ್ ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಒಟ್ಟು 2755 ರನ್ ಕಲೆಹಾಕಿದ್ದಾರೆ. ಈ ವೇಳೆ 8 ಭರ್ಜರಿ ಶತಕ ಹಾಗೂ 13 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದೀಗ 50ನೇ ಪಂದ್ಯದಲ್ಲಿ ಕಣಕ್ಕಿಳಿದಿರುವ ರಾಹುಲ್ ಕಡೆಯಿಂದ 50+ ಸ್ಕೋರ್ ಮೂಡಿಬರಲಿದೆಯಾ ಕಾದು ನೋಡಬೇಕಿದೆ.

 

ಫ್ರೆಶ್ ನ್ಯೂಸ್

Latest Posts

Featured Videos