ಕೊಡಗು ಜಿಲ್ಲಾಧಿಕಾರಿಗೆ ಸಿಎಂ ಸೂಚನೆ!

ಕೊಡಗು ಜಿಲ್ಲಾಧಿಕಾರಿಗೆ ಸಿಎಂ ಸೂಚನೆ!

ಕೊಡಗು, ಮೇ. 16, ನ್ಯೂಸ್ಎಕ್ಸ್ ಪ್ರೆಸ್‍:  ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, ಕೊಡಗು ಜಿಲ್ಲಾಧಿಕಾರಿಗೆ ಮುನ್ನಚ್ಚರಿಕೆ ಕ್ರಮ ಜರುಗಿಸುವಂತೆ ನಿರ್ದೇಶನ ನೀಡಿದ್ದಾರೆ. ಕಳೆದ ವರ್ಷ ವರುಣನ ಆರ್ಭಟದಿಂದಾಗಿ ಕೊಡಗು ಜಿಲ್ಲೆಯಲ್ಲಿ ಉಂಟಾದ ಅತಿವೃಷ್ಟಿಅನಾಹುತದಿಂದ ಎಚ್ಚೆತ್ತ ರಾಜ್ಯ ಸರ್ಕಾರವು ಈ ಬಾರಿ ಮುಂಗಾರು ಹಂಗಾಮಿನಲ್ಲಿ ನೆರೆ ಅನಾಹುತ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.

ಹಾರಂಗಿ ಜಲಾಶಯ: ಹಾರಂಗಿ ಜಲಾಶಯದಲ್ಲಿ ಹೂಳೆತ್ತುವ ಕಾರ್ಯಕ್ಕೆ ಜಲಸಂಪನ್ಮೂಲ ಇಲಾಖೆ  ಸಿದ್ಧತೆ ಮಾಡಿಕೊಂಡಿದೆ. ಇದರ ಆಗುಹೋಗುಗಳಿಗೆ ಕ್ರಮ ಕೈಗೊಳ್ಳುತ್ತಿದೆ. ಅಗ್ನಿಶಾಮಕ ಸೇರಿ ಇತರ ಇಲಾಖೆಗಳಿಗೆ ರಕ್ಷಣಾ ಕಾರ್ಯಕ್ಕೆ ಅಗತ್ಯ ಇರುವ ಪರಿಕರಗಳ ಖರೀದಿಗೆ ಕ್ರಮ ವಹಿಸಲಾಗಿದೆ. ನೆರೆ ಸಂತ್ರಸ್ತರಿಗೆ ಗೃಹನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ. ಬಡಾವಣೆಗಳಿಗೆ ರಸ್ತೆ ಸಂಪರ್ಕ, ಒಳಚರಂಡಿ ಸೇರಿದಂತೆ  ಮೂಲಸೌಕರ್ಯ ಕಲ್ಪಿಸುವ ಪ್ರಸ್ತಾವನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿ ತ್ವರಿತ ಕೆಲಸ ಪೂರ್ಣಗೊಳಿಸುವಂತೆ ಹೇಳಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos