ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್: ಅತೀ ಹೆಚ್ಚು ರನ್​ ಬಾರಿಸಿದ ಭಾರತೀಯ ಬ್ಯಾಟರ್ ಕೊಹ್ಲಿ!!

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್: ಅತೀ ಹೆಚ್ಚು ರನ್​ ಬಾರಿಸಿದ ಭಾರತೀಯ ಬ್ಯಾಟರ್ ಕೊಹ್ಲಿ!!

ಬೆಂಗಳೂರು: ಸೆಂಚುರಿಯನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 38 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ 64 ಎಸೆತಗಳಲ್ಲಿ 5 ಫೋರ್​ಗಳನ್ನು ಬಾರಿ 38 ರನ್​ ಬಾರಿಸಿದ್ದರು. ಈ 38 ರನ್​ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ರನ್​ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದರು. ಹಿಟ್​ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಒಟ್ಟು 43 ಇನಿಂಗ್ಸ್​ ಆಡಿದ್ದು, ಈ ವೇಳೆ 2097 ರನ್ ಕಲೆಹಾಕಿದ್ದಾರೆ. ಇದೀಗ 57 ಇನಿಂಗ್ಸ್​ಗಳ ಮೂಲಕ ವಿರಾಟ್ ಕೊಹ್ಲಿ 2101 ರನ್ ಕಲೆಹಾಕಿದ್ದಾರೆ. ಈ ಮೂಲಕ ರೋಹಿತ್ ಶರ್ಮಾರನ್ನು ಹಿಂದಿಕ್ಕಿ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ರನ್​ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos