ಕೊಹ್ಲಿ ಅಬ್ಬರಕ್ಕೆ ದಾಖಲೆಗಳು ಉಡೀಸ್

ಕೊಹ್ಲಿ ಅಬ್ಬರಕ್ಕೆ ದಾಖಲೆಗಳು ಉಡೀಸ್

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಎಂದರೆ ಕ್ರೀಕೆಟ್‌ ಅಭಿಮಾನಿಗಳಿಗೆ ರಸದೌತನ. ಐಪಿಎಲ್‌ ಆರಂಭವಾಗಿ ಎಲ್ಲಾ ತಂಡಗಳು ಒಂದೊಂದು ಪಂದ್ಯಗಳನೂ ಆಡಿದ್ದಾರೆ. ನಿನ್ನೆ ನಡೆದ 10ನೇ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಿತ್ತು.

ಇದರ ಹೊರತಾಗಿಯೂ ವಿರಾಟ್ ಕೊಹ್ಲಿ ಬಾರಿಸಿದ ಅಜೇಯ 83 ಹಾಗೂ ಕ್ಯಾಮರೋನ್ ಗ್ರೀನ್ (33) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತ್ತು.

ಐಪಿಎಲ್ 10ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಮೂರು ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ ಜಬರ್​ದಸ್ತ್ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಕೊಹ್ಲಿ 39 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅಲ್ಲದೆ 59 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ 4 ಫೋರ್​ಗಳೊಂದಿಗೆ ಅಜೇಯ 83 ರನ್ ಬಾರಿಸಿದರು. ಈ ಭರ್ಜರಿ ಇನಿಂಗ್ಸ್​ನೊಂದಿಗೆ ಕೊಹ್ಲಿ 2 ದಾಖಲೆಗಳನ್ನು ಬರೆದರು.

ಈ ಪಂದ್ಯದಲ್ಲಿ 4 ಸಿಕ್ಸ್ ಸಿಡಿಸುವುದರೊಂದಿಗೆ ಆರ್​ಸಿಬಿ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಕೊಹ್ಲಿ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ (239 ಸಿಕ್ಸ್) ಹೆಸರಿನಲ್ಲಿತ್ತು. ಇದೀಗ 241 ಸಿಕ್ಸ್​ಗಳೊಂದಿಗೆ ಆರ್​ಸಿಬಿ ತಂಡದ ಸಿಕ್ಸರ್ ಸರದಾರನಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ. ಹಾಗೆಯೇ ಈ ಪಟ್ಟಿಯಲ್ಲಿ 357 ಸಿಕ್ಸ್​ ಸಿಡಿಸಿರುವ ಕ್ರಿಸ್ ಗೇಲ್ ಅಗ್ರಸ್ಥಾನದಲ್ಲಿದ್ದಾರೆ.

ಹಾಗೆಯೇ ಈ ಪಂದ್ಯದಲ್ಲಿ ಫೀಲ್ಡಿಂಗ್ ಮೂಲಕವೂ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದಾರೆ. ವೆಂಕಟೇಶ್ ಅಯ್ಯರ್ ಅವರು ನೀಡಿದ ಕ್ಯಾಚ್ ಹಿಡಿಯುವುದರೊಂದಿಗೆ ಐಪಿಎಲ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ರೈನಾ ಅವರ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos