ಕೊಪ್ಪಳದಲ್ಲಿ ಬೆಳ್ಳಕ್ಕಿ ಕಲರವ

ಕೊಪ್ಪಳದಲ್ಲಿ ಬೆಳ್ಳಕ್ಕಿ ಕಲರವ

ಕೊಪ್ಪಳ, ಜ. 5 : ಹೊಲ ಗದ್ದೆಗಳಲ್ಲಿ ಬೇಸಿಗೆ ಬೆಳೆಯ ಭತ್ತ ನಾಟಿ ಮಾಡುವ ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದಂತೆ ಆಹಾರ ಅರಸಿ ಹೊಲಗಳಿಗೆ ಆಗಮಿಸುತ್ತಿರುವ ಬೆಳ್ಳಕ್ಕಿಗಳ ಹಿಡ್ಡು ಗದ್ದೆಗಳಿಗೆ ರಂಗು ಮೂಡಿಸುತ್ತಿವೆ. ಪ್ರತಿ ವರ್ಷ ಮುಂಗಾರು ಬೆಳೆ ಕಟಾವು ಮಾಡಿದ ನಂತರ ಬೇಸಿಗೆ ಬೆಳೆಗಾಗಿ ಭತ್ತದ ಸಸಿ ಮಡಿಗಳನ್ನು ಹಾಕಿ, ಎರಡ್ಮೂರು ತಿಂಗಳುಗಳ ಕಾಲ ಸಾವಯುವ ಗೊಬ್ಬರ, ಸಗಣೆ ಗೊಬ್ಬರಗಳನ್ನು ಹಾಕಿ ಭೂಮಿಯನ್ನು ಸಜ್ಜುಗೊಳಿಸುತ್ತಿದ್ದರು. ಆದರೆ ಈ ಬಾರಿ ಕಟಾವು ಮಾಡಿದ 15 ದಿನಗಳಲ್ಲಿಯೇ ಪುನಃ ಬೇಸಿಗೆ ಬೆಳೆಯನ್ನು ನಾಟಿ ಮಾಡಲು ಜಮೀನು ಸಿದ್ಧಗೊಳಿಸಲು ರೈತರು ಮುಂದಾಗಿದ್ದಾರೆ. ಅದಕ್ಕಾಗಿ ಹೊಲಗಳಿಗೆ ನೀರು ಹರಸಿ ಭೂಮಿಯನ್ನು ಹದಗೊಳಿಸಲಾಗುತ್ತಿದೆ.

ಹಕ್ಕಿಗಳ ಕಲರವ..?
ತುಂಗಭದ್ರಾ ನದಿ ಪಾತ್ರಗಳಲ್ಲಿ ಹಾಗೂ ಕೊಳವೆ ಬಾವಿ ಹೊಂದಿರುವ ರೈತರು ಸೇರಿ ಒಟ್ಟು 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತವನ್ನು ನಾಟಿ ಮಾಡಲಾಗುತ್ತದೆ. ನದಿ ಪಾತ್ರ ಮತ್ತು ಕೊಳವೆ ಬಾವಿ ನೀರು ಬಳಸಿ ರೈತರು ಬೇಸಿಗೆ ಬೆಳೆಯನ್ನು ನಾಟಿ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸರಿಸುಮಾರು 400ಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಭತ್ತವನ್ನು ನಾಟಿ ಮಾಡುವ ಕಾರ್ಯ ಜೋರಾಗಿಯೇ ನಡೆಯುತ್ತಿದೆ. ಹಾಗಾಗಿಯೇ ಹಕ್ಕಿಗಳು ಆಹಾರವನ್ನು ಅರಸಿ ತಾಲೂಕಿನ ಆನೆಗೊಂದಿ, ಚಿಕ್ಕರಂಪೂರ, ಮಲ್ಲಾಪೂರ, ಸಣಾಪೂರ, ಢಣಾಪೂರ, ಚಿಕ್ಕಜಂತಕಲ್, ಮುಸ್ಟೂರು, ವಡ್ಡರಹಟ್ಟಿ, ಸಂಗಾಪೂರ, ಬಸವನದುರ್ಗ, ಹನುಮನಹಳ್ಳಿ, ಹಿರೇಜಂತಕಲ್, ಸಿದ್ದಿಕೇರಿ, ಮರಳಿ, ಪ್ರಗತಿನಗರ ಸೇರಿದಂತೆ ನಾನಾ ಗ್ರಾಮಗಳಲ್ಲಿ ಬೆಳ್ಳಕ್ಕಿಗಳ ಹಿಂಡು ಬೀಡು ಬಿಟ್ಟಿವೆ.

 

ಫ್ರೆಶ್ ನ್ಯೂಸ್

Latest Posts

Featured Videos