ಎಸ್.ಪಿ. ಖಡಕ್ ಆದೇಶಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರಶಂಸೆ

ಎಸ್.ಪಿ. ಖಡಕ್ ಆದೇಶಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರಶಂಸೆ

ತುಮಕೂರು, ಏ. 5, ನ್ಯೂಸ್ ಎಕ್ಸ್ ಪ್ರೆಸ್: ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನಾವಂಶಿಕೃಷ್ಣಿ ಅವರ ಖಡಕ್ ಆದೇಶಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ. ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲ ಸಾರ್ವಜನಿಕರು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿರುವುದು ಹೆಚ್ಚಾಗಿದ್ದು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿ ಹಲವು ಭಾರಿ ದಂಡ ಸಹ ವಿಧಿಸಲಾಗಿತ್ತು. ನಗರದಲ್ಲಿ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದ್ವಿಚಕ್ರವಾಹನ ಚಾಲನೆ ವೇಳೆ ಹೆಲ್ಮೆಟ್ ಧರಿಸದಿರುವುದು ಕಂಡು ಬಂದಿದ್ದು ಈ ಹಿನ್ನೆಲೆಯಲ್ಲಿ ಖಡಕ್ ಎಚ್ಚರಿಕೆ ಕೂಡ ನೀಡಲಾಗಿತ್ತು. ಸಾರ್ವಜನಿಕರಿಗೂ ಹಾಗೂ ಪೊಲೀಸ್ ಸಿಬ್ಬಂದಿಗಳಿಗೂ ಒಂದೇ ಕಾನೂನು ಎಂದು ಎಸ್ಪಿಯವರು ಸಂದೇಶ ಸಾರಿದ್ದು ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಇನ್ನು ಮುಂದೆ ಜಿಲ್ಲೆಯಲ್ಲಿ ಯಾವುದೇ ಅಧಿಕಾರಿ ಸಿಬ್ಬಂದಿಯವರೂ ಹೆಲ್ಮೆಟ್ ಧರಿಸದೆ ವಾಹನ ಸವಾರಿ ಮಾಡುವುದು ಕಂಡು ಬಂದಲ್ಲಿ ಕಾನೂನು ಉಲ್ಲಂಘನೆ ಬಗ್ಗೆ ದಂಡ ವಿಧಿಸುವ ಜತೆಗೆ ಇಲಾಖಾ ಶಿಸ್ತುಕ್ರಮವನ್ನು ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಸಂಚಾರಿ ಉಲ್ಲಂಘಿಸಿದವರಿಗೆ ಚಾಲನಾ ಪರವಾನಗಿಯನ್ನು ರದ್ದು ಪಡಿಸಲಾಗುವುದೆಂದು ಆದೇಶ ಹೊರಡಿಸಲಾಗಿತ್ತು. ನೂತನವಾಗಿ ಜಿಲ್ಲೆಗೆ ಆಗಮಿಸಿದ ಎಸ್ಪಿ ವಂಶಿಕೃಷ್ಣ ಹಲವು ಭಾರಿ ಎಚ್ಚರಿಕೆ ನೀಡಿ. ಠಾಣೆಗಳಿಗೂ ದಿಢೀರ್ ಭೇಟಿ ನೀಡಿ ಸಿಬ್ಬಂದಿಗಳಿಗೆ ಸಹ ಸೂಚನೆ ನೀಡಿದ್ದರು. ಈ ಬಗ್ಗೆ ಈ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಬ್ರಿಪಿಂಗ್ ಸಮಯದಲ್ಲಿ ಮಾಹಿತಿಯನ್ನು ನೀಡಿ. ಸ್ವೀಕೃತಿಯನ್ನು ಪಡೆಯುವುದು ಒಂದು ವೇಳೆ ಹೆಲ್ಮೆಟ್ ಇಲ್ಲದೆ ಚಾಲನೆ ಕಂಡು ಬಂದಲ್ಲಿ ಮೋಟಾರ್ ಕಾಯ್ದೆಯಡಿ ದಂಡವಿಧಿಸಿ ಕೂಡಲೇ ಶಿಸ್ತು ಕ್ರಮಕ್ಕಾಗಿ ಸಂಬಂಧಪಟ್ಟವರಿಗೆ ವಿಶೇಷ ವರದಿಯನ್ನು ಸಲ್ಲಿಸಲ್ಲು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ಅಧಿಕಾರಿಗಳು ವೃತ್ತ ನಿರೀಕ್ಷಕರುಗಳಿಗೆ ಸೂಚಿಸಲಾಗಿದೆ. ಒಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos