ಕಮಲ ತೊರೆದು ಕೈ ಸೇರಿದ ಕೆಪಿ ನಂಜುಂಡಿ

ಕಮಲ ತೊರೆದು ಕೈ ಸೇರಿದ ಕೆಪಿ ನಂಜುಂಡಿ

ಬೆಂಗಳೂರು: ವಿಧಾನ ಪರಿಷತ್ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ, ಕೆಪಿ ನಂಜುಂಡಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್​​ ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ನಂಜುಂಡಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ಇಂದು ಅಧಿಕೃತವಾಗಿ ಕಾಂಗ್ರೆಸ್​ ಪಕ್ಷ ಸೇರಿದ್ದಾರೆ. ರಾಜೀನಾಮೆ ಕೊಡುವಂತೆ ಎರಡು ವರ್ಷದಿಂದ ನಮ್ಮ ಸಮಾಜದ ಒತ್ತಡವಿತ್ತು. ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ, ನಮ್ಮ ಹೋರಾಟಕ್ಕೆ ಬೆಲೆ ಇಲ್ಲವಾಗಿದೆ. ಹೀಗಾಗಿ ನಾನು ಎಂಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದೇನೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್​ ಸೇರಿದ್ದೇನೆ ಎಂದು ಕೆಪಿ ನಂಜುಂಡಿ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos