ಕೆಪಿಸಿಸಿ ಸ್ಥಾನ ಗೊಂದಲ

ಕೆಪಿಸಿಸಿ ಸ್ಥಾನ ಗೊಂದಲ

ಬೆಂಗಳೂರು, ಜ. 5 : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಗೊಂದಲಗಳು ಮುಂದುವರೆದಿದ್ದು, ಈ ನಡುವಲ್ಲೇ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ನಗರದ ಕಾವೇರಿ ಗೃಹದಲ್ಲಿ ಭೇಟಿ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಸುಧೀರ್ಘ ಮಾತುಕತೆ ನಡೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇನ್ನು ಕೆಲವೇ ದಿನಗಳಲ್ಲಿ ಘೋಷಣೆಯಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದರ ನಡುವಲ್ಲೇ ಪಕ್ಷದಲ್ಲಿ ಆಂತರಿಕ ಗೊಂದಲಗಳು ತಾರಕ್ಕೇರಿವೆ.

ಈ ಹಿನ್ನೆಲೆಯಲ್ಲಿ ಉಭಯ ನಾಯಕರು ಭೇಟಿ ಮಾಡಿ, ಮಾತುಕತೆ ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಬಹುತೇಕ ಅಂತಿಮಗೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಗಳಾಗಿಲ್ಲ.
ಮತ್ತೊಂದೆಡೆ ಕಾಂಗ್ರೆಸ್ ಹಿರಿಯ ಮುಖಂಡ ಡಾ.ಜಿ.ಪರಮೇಶ್ವರ್ ಅವರ ನಿವಾಸದಲ್ಲಿಯೂ ಸಭೆ ನಡೆದಿದ್ದು, ನಾಯಕರು ಮಾತುಕತೆ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos