ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗೆ ಪರಿಹಾರ: ಕೆಪಿಸಿಸಿ ಅಧ್ಯಕ್ಷ!

ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗೆ ಪರಿಹಾರ: ಕೆಪಿಸಿಸಿ ಅಧ್ಯಕ್ಷ!

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡುವುದನ್ನು ಖಂಡಿಸಿ ಬೆಂಗಳೂರಿನ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಮಕರ ಸಂಕ್ರಾಂತಿ ಸಂದರ್ಭದಲ್ಲಿ ನಮ್ಮ ಹೊಟ್ಟೆಯ ಮೇಲೆ ಹೊಡೆಯಬೇಡಿ ಎಂದು ಜನರು ಕಣ್ಣೀರು ಇಟ್ಟಿದ್ದಾರೆ. ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗೆ ಬಗ್ಗೆ ನಮ್ಮ ಗಮನ ಇದೆ.

ನನ್ನನ್ನು ಭೇಟಿಯಾಗಿ ಹಲವು ಬಾರಿ ಸಮಸ್ಯೆಗಳನ್ನು ತೋಡಿಕೊಂಡಿದ್ದಾರೆ. ಆದರೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಸರಿಪಡಿಸಬೇಕಿದೆ , ಫುಟ್ಬಾತ್ ಗಳು ಜನರ ಓಡಾಟಕ್ಕೆ ಮುಕ್ತಾಯವಾಗಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಅದನ್ನು ಪಾಲಿಸಬೇಕು. ಬೀದಿ ಬದಿ ವ್ಯಾಪಾರಿಗಳು ಮೊದಲು ಲೈಸೆನ್ಸ್ ಅನ್ನು ತೆಗೆದುಕೊಳ್ಳಿ ಬಳಿಕ ಜನರ ಹೋರಾಟಕ್ಕೆ ತೊಂದರೆಯಾಗದಂತೆ ತಳ್ಳುಗಾಡಿ ಹಾಕಿಕೊಂಡು ವ್ಯಾಪಾರವನ್ನು ಮಾಡುವುದು ಸೂಕ್ತ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos