ಕೆ.ಆರ್.ಮಾರುಕಟ್ಟೆಯಲ್ಲಿ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ

ಕೆ.ಆರ್.ಮಾರುಕಟ್ಟೆಯಲ್ಲಿ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ

ಬೆಂಗಳೂರು, ಮಾ, 29, ನ್ಯೂಸ್ ಎಕ್ಸ್ ಪ್ರೆಸ್: ನಗರದ ಐತಿಹಾಸಿಕ ಕೃಷ್ಣರಾಜ ಮಾರುಕಟ್ಟೆಯಲ್ಲಿ ಮಹಾನಗರ ಪಾಲಿಕೆ ಬೃಹತ್ ತೆರವು ಕಾರ್ಯಾಚರಣೆ ಆರಂಭಿಸಿದೆ. ಹೈಕೋರ್ಟ್​​ ಆದೇಶ ಹಿನ್ನೆಲೆಯಲ್ಲಿ ಇಲ್ಲಿ ನಿರ್ಮಾಣವಾಗಿರುವ ಅನಧಿಕೃತ ಮಳಿಗೆಗಳನ್ನು ನೆಲಸಮ ಮಾಡಲಾಗುತ್ತಿದೆ. ಕೆ.ಆರ್​. ಮಾರ್ಕೆಟ್​ ​ ಕೆಳ ಅಂತಸ್ತಿನಲ್ಲಿ ಅನಧಿಕೃತ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿತ್ತು. ಇದನ್ನು ನೆಲಸಮ ಮಾಡುವ ನಿರ್ಧಾರದ ಬಗ್ಗೆ ಸ್ಥಳೀಯ ವ್ಯಾಪಾರಸ್ಥರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಇವುಗಳನ್ನು ತೆರವು ಮಾಡುವಂತೆ ಹೈಕೋರ್ಟ್ ಆದೇಶ ನೀಡಿದ ಹಿನ್ನಲೆಯಲ್ಲಿ ಬಿಬಿಎಂಪಿ ತೆರವರು ಕಾರ್ಯಾಚರಣೆ ಆರಂಭಿಸಿದೆ. ಈಗಾಗಲೇ ಕಾರ್ಯಾಚರಣೆ ಆರಂಭಗೊಂಡಿದೆ. ಸ್ಥಳದಲ್ಲಿ 8-10 ಜೆಸಿಬಿಗಳು ಆಗಮಿಸಿವೆ. ಈ ಕಾರ್ಯಾಚರಣೆಗೆ ಸ್ಥಳೀಯ ವ್ಯಾಪಾರಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇನ್ನು ಸ್ಥಳದಲ್ಲಿ ಬಿಗಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಕಾರ್ಯಾಚರಣೆಗಾಗಿ 6 ಜೆಸಿಬಿ, ಕಟ್ಟಡ ತ್ಯಾಜ್ಯಗಳು, ನಿರ್ಮಾಣದ ಭಾಗಗಳನ್ನು ಸಾಗಿಸಲು 15 ಲಾರಿ, ಟ್ಯಾಕ್ಟರ್​ಗಳ ಬಳಕೆ ಮಾಡಿಕೊಳ್ಳಲಾಗಿದೆ. ತೆರವು ಕಾರ್ಯಾಚರಣೆಯಲ್ಲಿ ಒಟ್ಟು 500 ಕಾರ್ಮಿಕರ ಇದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos