ಬೆಂಗಳೂರು: ಕರ್ನಾಟಕದ್ಯಾದಂತ ಇಂದು ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಜೊರಾಗಿದೆ. ಇಸ್ಕಾನ್ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿಯ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಯನ್ನು ನಡೆಸಿದ್ದಾರೆ. ಇಸ್ಕಾನ್ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಕೃಷ್ಣನನ್ನು ಹೆಚ್ಚು ಅಲಂಕಾರ ಮಾಡುತ್ತಾರೆ ಹಾಗೂ ವಿಜೃಂಭಣೆಯಿಂದ ಪೂಜೆಯನ್ನು ಮಾಡುತ್ತಾರೆ.
ಇಸ್ಕಾನ್ ದೇವಸ್ಥಾನಕ್ಕೆ ಹಲವಾರು ಭಕ್ತರ ಆಗಮನದಿಂದ ಹೆಚ್ಚು ಟ್ರಾಫಿಕ್ ಜಾಮ್ ಆಗುವುದರಿಂದ. ಬಸ್ ವ್ಯವಸ್ಥೆಯನ್ನು ಸುಗಮಗೊಳಿಸಲು ಇಂದು ಮತ್ತು ನಾಳೆಯ ಮಟ್ಟಿಗೆ ಒಂದಷ್ಟು ಏರ್ಪಾಡುಗಳನ್ನು ಮಾಡಿಕೊಂಡಿದೆ. ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ಗಳ ಸಂಚಾರದಲ್ಲಿ ಸಾಕಷ್ಟು ಮಾರ್ಪಾಡುಗಳನ್ನು ಮಾಡಿದೆ.
ಇಸ್ಕಾನ್ ದೇವಸ್ಥಾನಕ್ಕೆ ಭಕ್ತರು, ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆ ಸುಗಮವಾಗಿರಲೆಂದು ಇಸ್ಕಾನ್ ಸುತ್ತಮುತ್ತ ಬಸ್ ಸಂಚಾರವನ್ನು ನಿಷೇಧ ಮಾಡಲಾಗಿದೆ. ಇಸ್ಕಾನ್ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಇಂದು ಮತ್ತು ನಾಳೆ ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದ್ದು, ಬಸ್ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಇಸ್ಕಾನ್ ಗೆ ಹಲವು ಭಕ್ತರು, ಗಣ್ಯರ ಆಗಮನ ಹಿನ್ನೆಲೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಈ ಸೂಚನೆ ನೀಡಲಾಗಿದೆ.
ಇಸ್ಕಾನ್ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಇಂದು ಮತ್ತು ನಾಳೆ ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದ್ದು, ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಯಶವಂತಪುರ ಕಡೆಯಿಂದ ರಾಜ್ ಕುಮಾರ್ ರಸ್ತೆ-ಮೆಜೆಸ್ಟಿಕ್ ಕಡೆಗೆ ಮಾಮೂಲು ಮಾರ್ಗದಲ್ಲಿ ಸಂಚರಿಸುವ ಬದಲು ಯಶವಂತಪುರ-ಮಾರಪ್ಪನಹಳ್ಳಿ ಫ್ಲೈ ಓವರ್ ಮೂಲಕ BHEL ಅಂಡರ್ ಪಾಸ್, ಕೆ.ಸಿ.ಜನರಲ್ ಆಸ್ಪತ್ರೆಯ ಮಾರ್ಗವಾಗಿ ಬಸ್ಗಳು ಸಂಚಾರ ಮಾಡಲಿವೆ.