ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್ ಈಶ್ವರಪ್ಪ

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎರಡು ಹಂತದಲ್ಲಿ ನಡೆಯಲಿದ್ದು ಅಭ್ಯರ್ಥಿಗಳು ಭರ್ಜರಿ ಮತ ಯಾಚಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಗನಿಗೆ ಟಿಕೆಟ್ ಸಿಗಲಿಲ್ಲವೆಂದು ಕೆ.ಎಸ್ ಈಶ್ವರಪ್ಪ ನವರು ಶಿವಮೊಗ್ಗದಲ್ಲಿ ಬಂಡಾಯ ಸ್ಪರ್ಧೆ ಮಾಡಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಣಕ್ಕಿಳಿಯುತ್ತಿದ್ದು ಇಂದು ನಾಮಪತ್ರ  ಸಲ್ಲಿಕೆ ಮಾಡಿದರು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಲೋಕಸಭೆ ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಸೋಲೋದು ಗ್ಯಾರಂಟಿ. ಚುನಾವಣೆ ನಂತರ ಬಿ. ವೈ ವಿಜಯೇಂದ್ರ ರಾಜೀನಾಮೆ ನೀಡ್ತಾರೆ. ಬಳಿಕ ಉತ್ತಮವಾದ ಬಿಜೆಪಿ ಮತ್ತೆ ಕಟ್ಟುತ್ತೇವೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos