ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಕೆಎಸ್‌ಆರ್‌ಟಿಸಿ!

ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಕೆಎಸ್‌ಆರ್‌ಟಿಸಿ!

ಬೆಂಗಳೂರು: ರಾಜ್ಯದಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಜನರು ಹೆಚ್ಚಾಗಿ ಊರುಗಳ ಕಡೆಗೆ ತೆರೆಳುತ್ತಾರೆ. ಇದರಿಂದ ಖಾಸಗಿ ಬಸ್ಗಳಲ್ಲಿ ಟಿಕೇಟ್‌ ದರದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತದೆ. ಇದರಿಂದಾಗಿ ರಾಜ್ಯ ಸರ್ಕಾರ ಹಬ್ಬದ ಹಿನ್ನೆಲೆಯಲ್ಲಿ ಬಸ್ಸ್‌ ಗಳ ಸಂಖ್ಯೆಯನ್ನು ಹೆಚ್ಚಿಸಿದ್ದಾರೆ.

ಕ್ರಿಸ್ಮಸ್ ಹಬ್ಬದ ಹಿನ್ನಲೆ  ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ರಾಜ್ಯ ಸಾರಿಗೆ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿ 22ರಿಂದ 24ರವರೆಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನಿಂದ  ರಾಜ್ಯದ ಮೂಲೆಮೂಲೆಗೆ ತೆರಳಲು 1000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಅಲ್ಲದೆ ರಾಜ್ಯ, ಅಂತರರಾಜ್ಯದ ವಿವಿದೆಡೆಯಿಂದ 25ರಂದು ವಿಶೇಷ ಬಸ್ ಕಾರ್ಯಾಚರಣೆ ನಡೆಸಲಿದೆ.

ಪ್ರಯಾಣಿಕರು ಮುಂಗಡ ಆಸನ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮೂಲಕ ಮಾಡಬಹುದು.

 

ಫ್ರೆಶ್ ನ್ಯೂಸ್

Latest Posts

Featured Videos