ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿತ ಕೆ ಎಸ್ ಆರ್ ಟಿ ಸಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿತ ಕೆ ಎಸ್ ಆರ್ ಟಿ ಸಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿತ್ತು. ಅದರೆ ಈಗ ಕೆಎಸ್ಆರ್ ಟಿಸಿ ಬಸ್ಸ್ನಲ್ಲೂ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಮಾಡಿದೆ ಹೌದು ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಉಚಿತ ಸೇವೆ ನೀಡಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದ್ದು ಪರೀಕ್ಷೆ ನಡೆಯುವ ದಿನಾಂಕಗಳನ್ನು ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ತೆರಳು ಅವಕಾಶ ನೀಡಲಾಗಿದೆ.

ಮಾರ್ಚ್ 1 ರಿಂದ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ಈ ಅವಧಿಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಕೆಎಸ್ಆರ್ ಟಿಸಿ ನಗರ ವಲಯ ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳು ಪ್ರಯಾಣದ ಸಮಯದಲ್ಲಿ ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪರೀಕ್ಷೆ ಕೇಂದ್ರಕ್ಕೆ ಪ್ರಯಾಣ ಮಾಡಬಹುದು ಪರೀಕ್ಷಾ ಕೇಂದ್ರಗಳ ಮುಂದೆ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಾಹಕರಿಗೆ ಸೂಚನೆ ನೀಡಲಾಗಿದ್ದು ಅಲ್ಲದೆ ಹೆಚ್ಚುವರಿ ಬಸ್ ಬಿಡಲು ಕೆಎಸ್ಆರ್ ಟಿಸಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos