ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್ಸ್‌ ವ್ಯವಸ್ಥೆ ಮಾಡಿದ KSRTC

ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್ಸ್‌ ವ್ಯವಸ್ಥೆ ಮಾಡಿದ KSRTC

ಬೆಂಗಳೂರು: ಹಬ್ಬಗಳು ಬಂದಿದ್ದರೆ ಸಾಕು ಸಾಲು ರಜೆಗಳು ಸಿಗಲಿರುವ ಕಾರಣ ಜನರು ಊರುಗಳಿಗೆ ತೆರಳುತ್ತಿದ್ದಾರೆ. ಇದನ್ನೇ ಉಪಯೋಗಿಸಿಕೊಳ್ಳಿತ್ತಿರುವ ಖಾಸಗಿ ಬಸ್ಗಳು ಟಿಕೆಟ್ ದರದಲ್ಲಿ ಬಾರಿ ಏರಿಕೆ ಮಾಡಲಾಗಿದ್ದು. ಇದರಿಂದ ಪ್ರಯಾಣಿಕರು ಕಂಗಲಾಗಿದ್ದರು.

ಯುಗಾದಿ ಹಬ್ಬದ  ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ. ಯುಗಾದಿ ಹಬ್ಬ ಹಾಗೂ ಸಾಲು ರಜೆಗಳ ಕಾರಣ ಊರಿಗೆ ತೆರಳುವವರಿಗೆ ಹಾಗೂ ಪ್ರವಾಸ ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​​ಆರ್​ಟಿಸಿ ಈ ಕ್ರಮಕ್ಕೆ ಮುಂದಾಗಿದೆ.

ಏಪ್ರಿಲ್ 9ರಂದು ಮಂಗಳವಾರ ಯುಗಾದಿ ಹಬ್ಬ ಇರಲಿದೆ. ಹಬ್ಬಗಳು ಹಾಗೂ ವಾರಾಂತ್ಯದ ಕಾರಣ ಏಪ್ರಿಲ್ 7 ರಿಂದ ಏಪ್ರಿಲ್ 14ರ ವರೆಗೆ ಬರೋಬ್ಬರಿ 5 ರಜೆಗಳು ಸಿಗಲಿವೆ. ವಿದ್ಯಾರ್ಥಿಗಳಿಗೆ ಬೇಸಗೆ ರಜೆಯೂ ಶುರುವಾದ ಕಾರಣ ಮಕ್ಕಳ ಜೊತೆ ಪ್ರವಾಸಕ್ಕೆ ತೆರಳು ಪೋಷಕರು ಯೋಜನೆ ಹಾಕಿಕೊಂಡಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಶೇಷ ಬಸ್ ಸೇವೆ ಒದಗಿಸಲಾಗುತ್ತಿದೆ.

ಕೆಎಸ್‌ಆರ್‌ಟಿಸಿಯಿಂದ 1,750ಬಸ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 145 ಬಸ್, ಕೆಕೆಆರ್‌ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‌ಗಳು ಸಂಚಾರ ಮಾಡಲಿವೆ. ಒಟ್ಟು ನಾಲ್ಕು ನಿಗಮಗಳಿಂದ 2,275 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos