ಕೆಎಸ್ ಆರ್ಟಿಸಿ ಬಸ್ ಟೈರ್ ಸ್ಫೋಟ: 4 ನಜರಿಗೆ ಗಾಯ

ಕೆಎಸ್ ಆರ್ಟಿಸಿ ಬಸ್ ಟೈರ್ ಸ್ಫೋಟ: 4 ನಜರಿಗೆ ಗಾಯ

ಚಿಕ್ಕಬಳ್ಳಾಪುರ, ಮೇ, 7. ನ್ಯೂಸ್ ಎಕ್ಸ್ ಪ್ರೆಸ್: ಇಂದು ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಟೈರ್ ಸ್ಫೋಟಗೊಂಡು 4 ಜನರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಬಳಿ ನಡೆದಿದೆ. ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಟೈರ್ ಏಕಾ ಏಕಿ ಸ್ಫೋಟಗೊಂಡು ಅವಘಡ ಅಂಭವಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರ ಐಟಿಐ ಕಾಲೇಜು ಬಳಿ ನಡೆದಿದೆ. ದೊಡ್ಡಬಳ್ಳಾಪುರ ನಗರದಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಅನಂತಪುರಕ್ಕೆ ತೆರಳುತ್ತಿದ್ದ ಬಸ್ ಇದಾಗಿತ್ತು.

ಚಾಲಕ, ನಿರ್ವಾಹಕ ಹಾಗೂ 2 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಾಗೇಪಲ್ಲಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos