ಸಾರಿಗೆ ಇಲಾಖೆಯಿಂದ ಪ್ರಯಾಣಿಕರಿಗೆ ಬಂಪರ್‌ ಆಫರ್

ಸಾರಿಗೆ ಇಲಾಖೆಯಿಂದ ಪ್ರಯಾಣಿಕರಿಗೆ ಬಂಪರ್‌ ಆಫರ್

ಬೆಂಗಳೂರು, ಸೆ.12: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೆ.15ರಿಂದ 18ರವರೆಗೆ ಹೆಚ್ಚುವರಿ ಬಸ್‍ಗಳು ಕಾರ್ಯಾಚರಣೆ ಮಾಡಲಿವೆ.  ಹೌದು, ಹಬ್ಬ ನಿಮಿತ್ತ ವಲಿಸಿಗರು ತಮ್ಮ ತಮ್ಮ ಊರಿಗೆ ತೆರಳುವಾಗ ಪ್ರಯಾಣಿಕರು ಯಾವುದೇ ರಿತಿ ತೊಂದರೆಗಿಡಾಗಬಾರೆಂದು ಗಮನದಲ್ಲಿಟ್ಟು ಕೊಂಡು ಸಾರಿಗೆ ಇಲಾಖೆ  ಬೆಂಗಳೂರಿನಿಂದ ಬೇರೆ ಸ್ಥಳಗಳಿಗೆ 1200 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ,ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ,ವಿಜಯವಾಡ, ಹೈದರಾಬಾದ್ ಇನ್ನಿತರ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್‍ಗಳು ಸಂಚರಿಸಲಿದ್ದು, ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್‍ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos