ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ರಸ್ತೆ ಸಾರಿಗೆ ನಿಗಮದಿಂದ ಈಗಾಗಲೇ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ಗಳನ್ನು ಹೊಸದಾಗಿ ಲೋಕಾರ್ಪಣ ಮಾಡುವುದರ ಜೊತೆಗೆ ಮತ್ತೆ ಇದೀಗ ಐರಾವತ ಕ್ಲಬ್ ಕ್ಲಾಸಿಕ್ ವೋಲ್ವೋ ಬಸ್ ಗಳನ್ನು ಹೊಸದಾಗಿ ರೋಡಿಗಿಳಿಸಲು ತಯಾರಿ ಮಾಡಿಕೊಂಡಿದ್ದಾರೆ.
ಹೌದು, ಸಾರಿಗೆ ಇಲಾಖೆಯಲ್ಲಿ ಈಗಾಗಲೇ ಕೆಎಸ್ಆರ್ಟಿಸಿ ಸೇರಿದಂತೆ ಬಿಎಂಟಿಸಿ ಹಾಗೂ ಇನ್ನಿತರ ಹೊಸ ಬಸ್ ಗಳನ್ನು ಲೋಕಾರ್ಪಣೆ ಮಾಡಲಾಗಿದ್ದು ಅದರಂತೆ ಮತ್ತೆ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಐರಾವತ ಕ್ಲಬ್ ಕ್ಲಾಸ್ 2.0 (ವೋಲೋ -9600) 20 ಬಸ್ಸುಗಳನ್ನು ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಬುಧವಾರ ಅಕ್ಟೋಬರ್ 30) ರಂದು ಚಾಲನೆ ನೀಡಲಿದ್ದಾರೆ.
ಇನ್ನು ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮಾನ್ಯ ಅಧ್ಯಕ್ಷರು ಹಾಗೂ ಮಾನ್ಯ ಉಪಾಧ್ಯಕ್ಷರು, ಕೆ ಎಸ್ ಆರ್ ಟಿ ಸಿ ರವರು ಘನ ಉಪಸ್ಥಿತಿವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಮಾನ್ಯ ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರರವರು ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಚಿವರುಗಳು, ಮಾನ್ಯ ಸಂಸದರುಗಳು, ಮಾನ್ಯ ಶಾಸಕರುಗಳು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ.