ಕೆಎಸ್ಆರ್ಟಿಸಿ ನೌಕರರಿಗೆ ಅಂಚೆ ಮತದಾನ ವ್ಯವಸ್ಥೆ

ಕೆಎಸ್ಆರ್ಟಿಸಿ ನೌಕರರಿಗೆ ಅಂಚೆ ಮತದಾನ ವ್ಯವಸ್ಥೆ

ಬೆಂಗಳೂರು, ಮಾ.21, ನ್ಯೂಸ್ ಎಕ್ಸ್ ಪ್ರೆಸ್: ನಡೆಯಲಿರುವ ಲೋಕಸಭಾ ಚುನಾವಣೆಯ ಕುರಿತು ಕರ್ನಾಟಕ ರಾಜ್ಯ ರಸ್ತೆ ನಿಗಮ (ಕೆಎಸ್ಆರ್ಟಿಸಿ) ಚಾಲಕ ಮತ್ತು ನಿರ್ವಾಹಕರು ಅಂಚೆ ಮತದಾನ ಮಾಡಲು ಅನುಕೂಲವಾಗುವಂತೆ ನಿಗಮದ ಎಲ್ಲ ವಿಭಾಗಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ.

ಚುನಾವಣೆ ಸಂದರ್ಭದಲ್ಲಿ ಚಾಲಕರು ಮತ್ತು ನಿರ್ವಾಹಕರು ತಾವು ಮತ ಚಲಾಯಿಸುವ ಸ್ಥಳಗಳ ಹೊರತಾಗಿ ಬೇರೆ ಸ್ಥಳಗಳಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುತ್ತಾರೆ. ಹಾಗಾಗಿ ಮತದಾನದ ಹಕ್ಕಿನಿಂದ ದೂರ ಉಳಿಯಬಾರದು ಎಂಬ ಉದ್ದೇಶದಿಂದ ಅಂಚೆ ಮತ ಚಲಾಯಿಸಲು ನಿಗಮದ ಎಲ್ಲ ವಿಭಾಗಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಅತಿ ಹೆಚ್ಚು ಅಂಚೆ ಮತ ಸಂಗ್ರಹಿಸುವ ಘಟಕ ಹಾಗೂ ವಿಭಾಗಕ್ಕೆ ಬಹುಮಾನ ನೀಡುವುದಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos