ಕುಮಾರಸ್ವಾಮಿಗೆ ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ರೆ ಬರಲ್ಲ: ಡಿಕೆಶಿ

ಕುಮಾರಸ್ವಾಮಿಗೆ ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ರೆ ಬರಲ್ಲ: ಡಿಕೆಶಿ

ಬೆಂಗಳೂರು: ನೀಚ ಕೆಲಸ ಮಾಡುವುದರ ಜೊತೆಗೆ ಹೆಣ್ಣು ಮಕ್ಕಳ ದೇಹ, ಅಂಗಾಂಗಗಳನ್ನು ಚಿತ್ರೀಕರಣ ಮಾಡಿ ತಮ್ಮ ಮೊಬೈಲ್ ಅಥವಾ ಪೆನ್ಡ್ರೈವ್ಗಳಲ್ಲಿ ಇಟ್ಟುಕೊಳ್ಳುವುದು ಅವರ ನೀಚ ಕೆಲಸಕ್ಕೆ ಬಡ ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದಾರೆ.

ಹೌದು, ಜೆಡಿಎಸ್ ನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದಾರೆ. ಇನ್ನು ಈ ಆರೋಪವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಳ್ಳಿ ಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಬಗ್ಗೆ ಅಪಾರ ಗೌರವ ಇದೆ ಇಂಥ ಚಿಲ್ಲರೆ ಕೆಲಸಗಳನ್ನು ಯಾವತ್ತೂ ಮಾಡಲ್ಲ. ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ ಎಂದು ತಿರುಗೇಟು ನೀಡಿದರು.

ಇಂಥವರನ್ನ ಭಗವಂತನೂ ಕ್ಷಮಿಸಲ್ಲ. ಕುಮಾರಸ್ವಾಮಿ ಅವರಿಗೆ ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ರೆ ಬರಲ್ಲ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದೆ. ಕಾನೂನು ಪ್ರಕಾರ ಏನು ಆಗಬೇಕೋ, ಅದು ಆಗುತ್ತದೆ. ಹಾಗೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಅವರ ಜತೆಗೆ ಇದ್ದವರು ಯಾರು? ಯಾರು ಯಾರಿಗೆ ಕರೆ ಮಾಡಿದ್ರು ಅನ್ನೋದನ್ನ ಅವರನ್ನೇ ಕೇಳಬೇಕು ಎಂದರು.

ಫ್ರೆಶ್ ನ್ಯೂಸ್

Latest Posts

Featured Videos