ಬಿಡುಗಡೆಗೂ ಮುನ್ನ ದಾಖಲೆ ಬರೆದ ‘ಕುರುಕ್ಷೇತ್ರ’

ಬಿಡುಗಡೆಗೂ ಮುನ್ನ ದಾಖಲೆ ಬರೆದ ‘ಕುರುಕ್ಷೇತ್ರ’

ಬೆಂಗಳೂರು,ಮೇ. 20, ನ್ಯೂಸ್ ಎಕ್ಸ್ ಪ್ರೆಸ್: ಕನ್ನಡ ಚಿತ್ರರಂಗದಲ್ಲಿ ಇತ್ತಿಚಿನ ದಿನಗಳಲ್ಲಿ ಹೊಸ ಹೊಸ ಚಿತ್ರಗಳು ದಾಖಲೆ ಮೇಲೆ ದಾಖಲೆಗಳನ್ನು ಬರೆಯುತ್ತಿವೆ. ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕುರುಕ್ಷೇತ್ರ’ ವರಮಹಾಲಕ್ಷ್ಮಿ ಹಬ್ಬದ ದಿನ ಬಿಡುಗಡೆಯಾಗಲಿದೆ. ಮುನಿರತ್ನ ನಿರ್ಮಾಣದಲ್ಲಿ, ನಾಗಣ್ಣ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಕುರುಕ್ಷೇತ್ರ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

‘ಹೈ ಬಜೆಟ್” ನಲ್ಲಿ ‘ಕುರುಕ್ಷೇತ್ರ’ ನಿರ್ಮಾಣವಾಗಿದ್ದು, ಬಿಡುಗಡೆಗೂ ಮೊದಲೇ ದಾಖಲೆ ಬರೆದಿದೆ. ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್ 9.50 ಕೋಟಿ ರೂ.ಗೆ ಮಾರಾಟವಾಗಿದೆ.ಕನ್ನಡ ಚಿತ್ರರಂಗದಲ್ಲಿ ಇದೊಂದು ಹೊಸ ದಾಖಲೆ ಎಂದು ಹೇಳಲಾಗಿದೆ. ಇನ್ನು ಕನ್ನಡ ಅವತರಣಿಕೆಯ ಸ್ಯಾಟಲೈಟ್ ಹಕ್ಕುಗಳು 9 ಕೋಟಿ ರೂ.ಗೆ ಮಾರಾಟವಾಗಿದೆ ಎನ್ನಲಾಗಿದೆ. ಬಹು ಭಾಷೆಗಳಲ್ಲಿ ‘ಕುರುಕ್ಷೇತ್ರ’ ಬಿಡುಗಡೆಯಾಗಲಿದ್ದು, ಚಿತ್ರದ ಕುರಿತ ಕುತೂಹಲ ಹೆಚ್ಚಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos