ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಕೊರತೆ!

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಕೊರತೆ!

ಬೆಂಗಳೂರು: ರಾಜ್ಯದಲ್ಲಿ ಅಂದು ಕೊಂಡಷ್ಟು ಮಳೆಯಾಗಿರಲ್ಲಿಲ್ಲಾ ಇದರಿಂದ ವಿದ್ಯುತ್ ಉತ್ಪಾದನೆಯಲ್ಲೂ ತೊಂದರೆಯಾಗುತ್ತಿದೆ.
ನಿನ್ನೆಯಷ್ಟೇ ಬೆಸ್ಕಾಂ ವಲಯದ ಕೈಗಾರಿಕಾ ಪ್ರತಿನಿಧಿಗಳ ಜತೆಗೆ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ಅವರು ವಿಡಿಯೋ ಸಂವಾದ ನಡೆಸಿದರು.
‘ರಾಜ್ಯ ವಿದ್ಯುತ್‌ ಅಭಾವ ಎದುರಿಸುತ್ತಿದ್ದರೂ ಬೆಸ್ಕಾಂ ವಲಯದ ಕೈಗಾರಿಕಾ ಪ್ರದೇಶಗಳಿಗೆ ನಿರಂತರ ವಿದ್ಯುತ್‌ ನೀಡಲಾಗುವುದು’ ಎಂದು ಭರವಸೆ ನೀಡಿದರು. ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ. ನಿರಂತರ ವಿದ್ಯುತ್‌ ಪೂರೈಸಲಾಗುವುದು’ ಎಂದು ಇಂಧನ ಇಲಾಖೆ ನಿನ್ನೆ ಸ್ಪಷ್ಟಪಡಿಸಿದೆ.
ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ ಸೇರಿದಂತೆ ಸರ್ಕಾರಿ ಅಧಿಕಾರಿಗಳಿಗೆ ಕೈಗಾರಿಕಾ ಸಂಸ್ಥೆಗಳು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಕೊರತೆಯಿಂದ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ತಿಳಿಸಿದವು.
ಸಚಿವ ಕೆಜೆ ಜಾರ್ಜ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಈ ಪತ್ರವನ್ನು ರವಾನಿಸಲಾಗಿತ್ತು. ವಿದ್ಯುತ್ ಕಡಿತದಿಂದ ಕೋಲ್ಡ್ ಸ್ಟೋರೇಜ್‌ನಲ್ಲಿರುವ ವಸ್ತುಗಳು ಕೊಳೆಯಲು ಆರಂಭಿಸಿರುವುದರಿಂದ ಆರ್ಥಿಕ ನಷ್ಟ ಅನುಭವಿಸುತ್ತಿದ್ದೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos